SHOCKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ : ಪಾಠ ಕೇಳುವಾಗಲೇ ಕುಸಿದುಬಿದ್ದು 4 ನೇ ತರಗತಿ ವಿದ್ಯಾರ್ಥಿ ಸಾವು.!

ಚಾಮರಾಜನಗರ : ರಾಜ್ಯದಲ್ಲಿ ಹೃದಯಾಘಾತ ಮುಂದುವರೆದಿದ್ದು, ಪಾಠ ಕೇಳುತ್ತಿದ್ದ ವೇಳೆ ಕುಸಿದುಬಿದ್ದು 4 ನೇ ತರಗತಿ ವಿದ್ಯಾರ್ಥಿ ಮೃತಪಟ್ಟ ಘಟನೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಕುರುಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಬೆಳಗ್ಗೆ ಈ ಘಟನೆ ನಡೆದಿದೆ. ಮೃತ ಬಾಲಕನನ್ನು ಮನೋಜ್ ಕುಮಾರ್ (10) ಎಂದು ಗುರುತಿಸಲಾಗಿದೆ.

ಪಾಠ ಕೇಳುವ ವೇಳೆ ಬಾಲಕನಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ವಿದ್ಯಾರ್ಥಿನಿಗೆ ಮೊದಲಿನಿಂದ ಹೃದಯ ಸಂಬಂಧಿ ಸಮಸ್ಯೆಯಿತ್ತು ಎನ್ನಲಾಗಿದೆ. ಮೃತ ವಿದ್ಯಾರ್ಥಿ ತಂದೆ-ತಾಯಿ ಕೂಲಿ ಮಾಡಿಕೊಂಡು ಬಹಳ ಬಡತನದ ಜೀವನ ನಡೆಸುತ್ತಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read