
ಗ್ರಾಮವೊಂದರ ನಿವಾಸಿ ಶಿವಣ್ಣ (55) ಎಂಬಾತ ಪಕ್ಕದ ಮನೆಯ 3 ವರ್ಷದ ಮಗುವನ್ನು ತನ್ನ ಮನೆಯೊಳಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದು, ಮಗು ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯರು ಮನೆಯ ಬಾಗಿಲು ಒಡೆದು ಮಗುವನ್ನು ರಕ್ಷಿಸಿದ್ದಾರೆ. ಜನರು ಮನೆ ಒಳಗೆ ನುಗ್ಗುತ್ತಿದ್ದಂತೆ ಕಾಮುಕ ಶಿವಣ್ಣ ಹಿಂದಿನ ಬಾಗಿಲಿನಿಂದ ಎಸ್ಕೇಪ್ ಆಗಿದ್ದಾನೆ.
ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದ್ದು, ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

