ಚಿತ್ರದುರ್ಗ: ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಗೃಹರಕ್ಷಕ ದಳ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ಜೆ.ಬಿ. ಹಳ್ಳಿಯಲ್ಲಿ ಘಟನೆ ನಡೆದಿದೆ. ಜೆ.ಬಿ. ಹಳ್ಳಿಯ ತಿರುಮಲ(31) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.
ಮನೆಯಲ್ಲಿ ಹೋಂ ಗಾರ್ಡ್ ತಿರುಮಲ ನೇಣಿಗೆ ಶರಣಾಗಿದ್ದಾರೆ. ಇತ್ತೀಚೆಗೆ ಮೂರು ಕಡೆ ಹೆಣ್ಣು ನೋಡಿಕೊಂಡು ಬಂದಿದ್ದರು. ಆದರೆ, ಯಾರೂ ಒಪ್ಪದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.