HomeKarnatakaSHOCKING : ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4...

SHOCKING : ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಶಾಲಾ ಬಸ್ ರಿವರ್ಸ್ ತೆಗೆದುಕೊಳ್ಳುತ್ತಿದ್ದ ವೇಳೆ ನಾಲ್ಕು ವರ್ಷದ ತನುಷಾ ಬಸ್’ನ ಮುಂಭಾಗದ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ತಾಯಿಯ ಕಣ್ಣೆದುರೇ ನಡೆದ ಈ ದುರಂತದಿಂದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ..
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರ ಸಮೀಪ ಈ ಘಟನೆ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಬಾಲಕಿ ತನುಷಾ ಮೃತಪಟ್ಟಿದ್ದಾಳೆ. ಶಾಲಾ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಬಾಲಕಿ ಸಾವನ್ನಪ್ಪಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

ಕಿಶೋರ್ ಹಾಗೂ ಮಧುಸ್ಮಿತಾ ದಂಪತಿಯ 2 ನೇ ಮಗು ತನುಷಾ ಮೃತ ಬಾಲಕಿ. ಮೊದಲ ಮಗಳು ಹನಿಕಾಳನ್ನು ಶಾಲಾ ವಾಹನದಿಂದ ಕರೆ ತರಲು ಮಧುಸ್ಮಿತಾ ತನುಷಾರನ್ನು ಕೂಡ ಜೊತೆಗೆ ಕರೆತಂದಿದ್ದರು. ಆದರೆ ಹನಿಕಾಳನ್ನು ಕರೆತರುವಷ್ಟರಲ್ಲೇ ಅಲ್ಲೇ ಆಡುತ್ತಿದ್ದ ತನುಷಾ ಮೇಲೆ ಬಸ್ ಹರಿದಿದೆ. ಗಂಭೀರವಾಗಿ ಗಾಯಗೊಂಡ ತನುಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಬಾಲಕಿ ಬಸ್ ಚಕ್ರದಡಿ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದ ಬಳಿಕ ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಚಾಲಕನ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular