HomeIndiaSHOCKING : ಪೋಷಕರೇ ಎಚ್ಚರ ; ಹುಣಸೆ ಬೀಜ ಗಂಟಲಿನಲ್ಲಿ ಸಿಲುಕಿ 7 ವರ್ಷದ ಬಾಲಕ...

SHOCKING : ಪೋಷಕರೇ ಎಚ್ಚರ ; ಹುಣಸೆ ಬೀಜ ಗಂಟಲಿನಲ್ಲಿ ಸಿಲುಕಿ 7 ವರ್ಷದ ಬಾಲಕ ಸಾವು!

ಆದಿಲಾಬಾದ್: ತೆಲಂಗಾಣದ ಆದಿಲಾಬಾದ್‌ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಹುಣಸೆ ಹಣ್ಣು ತಿನ್ನುತ್ತಿದ್ದ ವೇಳೆ ಹುಣಸೆ ಬೀಜಗಳು ಗಂಟಲಿನಲ್ಲಿ ಸಿಲುಕಿ ಉಸಿರಾಟಕ್ಕೆ ತೊಂದರೆಯಾಗಿ ಏಳು ವರ್ಷದ ಬಾಲಕ ಮೃತಪಟ್ಟಿದ್ದಾನೆ.

ತೆಲಂಗಾಣದ  ಆದಿಲಾಬಾದ್‌ನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಹುಣಸೆ ಹಣ್ಣು ತಿನ್ನುತ್ತಿದ್ದ ವೇಳೆ ಬೀಜಗಳು ಗಂಟಲಿನಲ್ಲಿ ಸಿಲುಕಿ ಉಸಿರಾಟಕ್ಕೆ ತೊಂದರೆಯಾದ ಪರಿಣಾಮ ಏಳು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸಿಪಿಆರ್‌ ಸೇರಿದಂತೆ ತುರ್ತು ಚಿಕಿತ್ಸೆ ಕೊಡಿಸಿದರೂ ಬಾಲಕನ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.

ಪಟ್ಟಣದ ಹೊರವಲಯದಲ್ಲಿರುವ ಕೆಆರ್‌ಕೆ ಕಾಲನಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕೆಆರ್‌ಕೆ ಕಾಲನಿ ನಿವಾಸಿ ಮಂಗೇಶ್‌ (7) ಮನೆಯಲ್ಲಿ ಆಟವಾಡುತ್ತಾ ಹುಣಸೆ ಹಣ್ಣು ತಿನ್ನುತ್ತಿದ್ದ. ಈ ವೇಳೆ ಹುಣಸೆ ಹಣ್ಣಿನ ಬೀಜಗಳನ್ನು ಅಗಿಯುತ್ತಿದ್ದಾಗ, ಆಕಸ್ಮಿಕವಾಗಿ ಬೀಜಗಳು ಒಂದೇ ಬಾರಿಗೆ ಗಂಟಲಿನಲ್ಲಿ ಸಿಲುಕಿಕೊಂಡಿವೆ. ಇದರಿಂದ ಬಾಲಕನಿಗೆ ಉಸಿರಾಡಲು ತೀವ್ರ ತೊಂದರೆ ಉಂಟಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕನ ಪರಿಸ್ಥಿತಿಯನ್ನು ಗಮನಿಸಿದ ಕುಟುಂಬಸ್ಥರು ತಕ್ಷಣವೇ ಆತನನ್ನು ಆದಿಲಾಬಾದ್‌ನ ರಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ತುರ್ತು ಚಿಕಿತ್ಸೆ ನೀಡಲು ಪ್ರಯತ್ನಿಸಿದ್ದು, ಸಿಪಿಆರ್ ಕೂಡ ಮಾಡಿದ್ದಾರೆ. ಆದರೆ ಬಾಲಕನ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬರಲಿಲ್ಲ. ಕೊನೆಗೆ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಆಟವಾಡುತ್ತಾ ಇದ್ದ ಬಾಲಕ ಹೀಗೆ ದಿಢೀರ್ ಮೃತಪಟ್ಟಿರುವುದು ಸ್ಥಳೀಯರಲ್ಲೂ ದುಃಖ ಮೂಡಿಸಿದೆ.

ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಘಟನೆಯ ವಿವರಗಳನ್ನು ಸಂಗ್ರಹಿಸಿದ್ದಾರೆ. ಬಾಲಕನ ಸಾವಿಗೆ ಕಾರಣವಾದ ಪರಿಸ್ಥಿತಿಗಳ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular