HomeKarnatakaಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ರೂ. ದರೋಡೆ

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ರೂ. ದರೋಡೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ನುಗ್ಗಿದ ದರೋಡೆಕೋರರು ಗನ್ ತೋರಿಸಿ ಮನೆಯಲ್ಲಿದ್ದವರನ್ನು ಬೆದರಿಸಿ 40 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ.

ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಹಕಾರ ನಗರದಲ್ಲಿ ಘಟನೆ ನಡೆದಿದೆ. ಕಾರ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಮನೆಗೆ ನುಗ್ಗಿ ಗನ್ ತೋರಿಸಿ ಮನೆಯಲ್ಲಿದ್ದವರನ್ನು ಬೆದರಿಸಿ ಹಣ ದೋಚಿ ಪರಾರಿಯಾಗಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಕ್ಕಪಕ್ಕದ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular