SHOCKING : ಬೆಳಗಾವಿಯಲ್ಲಿ ಆಘಾತಕಾರಿ ಘಟನೆ : ಪತಿ ಮೇಲೆ ಕಾದ ಎಣ್ಣೆ ಸುರಿದು ಹತ್ಯೆಗೆ ಯತ್ನಿಸಿದ ಪಾಪಿ ಪತ್ನಿ.!

ಬೆಳಗಾವಿ : ಬೆಳಗಾವಿಯಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಪತಿ ಮೇಲೆ ಪತ್ನಿ ಕಾದ ಎಣ್ಣೆ ಸುರಿದು ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಬಿಸಿ ಎಣ್ಣೆ ಮೈ ಮೇಲೆ ಬಿದ್ದ ಪರಿಣಾಮ ಪತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಭಾಷ್ ಪಾಟೀಲ್ (55) ಮೇಲೆ ಪತ್ನಿ ವೈಶಾಲಿ ಬಿಸಿ ಎಣ್ಣೆ ಎರಚಿದ್ದಾರೆ.

ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿ ಪತ್ನಿ ಈ ಕೃತ್ಯ ಎಸಗಿದ್ದಾರೆ. ಸುಭಾಷ್ ಪಾಟೀಲ್ ಸಿಲಿಂಡರ್ ವಿತರಣೆ ಮಾಡುವ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಬಂದು ಕುಳಿತಿದ್ದಾಗ ಪತ್ನಿ ಈ ಕೃತ್ಯ ಎಸಗಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read