ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, 8 ವರ್ಷದ ಬಾಲಕನನ್ನು ಅಪಹರಿಸಿ ಹತ್ಯೆ ಮಾಡಲಾಗಿದೆ.
ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾಲಕ ರಮಾನಂದ (8) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಪಕ್ಕದ ಮನೆ ಮೇಲಿರುವ ದ್ವೇಷಕ್ಕೆ ಬಾಲಕನನ್ನು ಅಪಹರಿಸಿ ಹತ್ಯೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಕೆರೆಯೊಂದರ ಬಳಿ ಶವ ಎಸೆಯಲಾಗಿದೆ.
ಪಕ್ಕದ ಮನೆಯ ನಿವಾಸಿ ಮತ್ತೂರು ಎಂಬಾತ ಈ ಕೃತ್ಯ ಎಸಗಿದ್ದು, ಬಾಲಕ ರಮಾನಂದ ಕುಟುಂಬ ಹಾಗೂ ಮತ್ತೂರು ನಡುವೆ ಗಲಾಟೆ ನಡೆದಿತ್ತು. ಈ ದ್ವೇಷಕ್ಕೆ ಬಾಲಕನನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ರಾಯಸಂದ್ರ ಕೆರೆ ಬಳಿ ಬಾಲಕನ ಶವ ಪತ್ತೆಯಾಗಿದ್ದು, ಪೊಲೀಸರು ಆರೋಪಿ ಮತ್ತೂರುನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
TAGGED:ಬಾಲಕನನ್ನು ಅಪಹರಿಸಿ ಹತ್ಯೆ.!