ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು,ಪುತ್ರನಿಗೆ ವಿಷ ಕುಡಿಸಿ ಕೊಂದು ತಾಯಿ ಮತ್ತು ಅಜ್ಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಎಸ್ ಜಿ ಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ. 14 ವರ್ಷದ ಬಾಲಕ ಮೌನೀಶ್ ನನ್ನ ಕೊಂದು ತಾಯಿ ಸುಧಾ ಹಾಗೂ ಅಜ್ಜಿ ಮುದ್ದಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣ ಎಂದು ಶಂಕಿಸಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
