ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ವಿದ್ಯಾರ್ಥಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೀನಿಯರ್ ವಿದ್ಯಾರ್ಥಿನಿಯನ್ನು ಕಾಲೇಜಿನ ವಾಶ್ ರೂಂಗೆ ಎಳೆದೊಯ್ದು ಜೂನಿಯರ್ ವಿದ್ಯಾರ್ಥಿ ಅತ್ಯಾಚಾರ ಎಸಗಿದ್ದಾನೆ. ಇಬ್ಬರಿಗೂ ಮೂರು ತಿಂಗಳ ಹಿಂದೆ ಪರಿಚಯವಾಗಿದೆ. ಇಬ್ಬರೂ ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಆರೋಪಿ ಮತ್ತು ಸಂತ್ರಸ್ತೆ ಪರಿಚಿತರಾಗಿದ್ದು, ಕಾಲೇಜಿನಲ್ಲಿ ಭೇಟಿಯಾದಾಗ ವಾಶ್ ರೂಂಗೆ ಎಳೆದೊಯ್ದು ಅತ್ಯಾಚಾರವೆಸಗಿದ ಜೂನಿಯರ್ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಹನುಮಂತನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.