15 ವರ್ಷದ ಬಾಲಕಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭಯಾನಕ ಘಟನೆ ಪುರಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಅಪ್ರಾಪ್ತ ಬಾಲಕಿಯನ್ನ ಭುವನೇಶ್ವರದ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ.
ಬಯಾಬರ್ ಗ್ರಾಮದಲ್ಲಿ ಬಾಲಕಿ ತನ್ನ ಸ್ನೇಹಿತನ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಮೂವರು ದುಷ್ಕರ್ಮಿಗಳು ಆಕೆಯನ್ನು ಅಡ್ಡಗಟ್ಟಿ ಬೆಂಕಿ ಹಚ್ಚಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈ ಘಟನೆ ಬಲಂಗಾ ಪೊಲೀಸ್ ಠಾಣೆಯಿಂದ ಕೇವಲ 1.5 ಕಿ.ಮೀ ದೂರದಲ್ಲಿ ನಡೆದಿದೆ. ಘಟನೆಯ ನಂತರ ಮೂವರು ಪರಾರಿಯಾಗಿದ್ದಾರೆ. ಪೊಲೀಸರು ದುಷ್ಕರ್ಮಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ ಮತ್ತು ಭಯಾನಕ ಕೃತ್ಯದ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಈ ಘಟನೆಯನ್ನು ಉಪಮುಖ್ಯಮಂತ್ರಿ ಪ್ರವತಿ ಪರಿದಾ ಉಲ್ಲೇಖಿಸಿ, ಅಪರಾಧಿಗಳನ್ನು ತಕ್ಷಣ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
#WATCH | Puri, Odisha | On a minor girl allegedly set ablaze, SP Pinak Mishra says, "This morning, we received information that a minor girl was assaulted and an inflammable substance was used to set her on fire. The girl was rescued and was referred to AIIMS Bhubaneswar. The… pic.twitter.com/ThqfgbiU8X
— ANI (@ANI) July 19, 2025
ಬಲಂಗೀರ್ ಪ್ರದೇಶದಲ್ಲಿ ಕೆಲವು ದುಷ್ಕರ್ಮಿಗಳು ರಸ್ತೆಯಲ್ಲಿ ಹದಿನೈದು ವರ್ಷದ ಬಾಲಕಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಸುದ್ದಿ ಕೇಳಿ ನನಗೆ ತುಂಬಾ ನೋವಾಗಿದೆ ಮತ್ತು ಆಘಾತವಾಗಿದೆ… ಆಕೆಯ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಸರ್ಕಾರವು ಎಲ್ಲಾ ವೈದ್ಯಕೀಯ ವೆಚ್ಚಗಳನ್ನು ಭರಿಸುತ್ತದೆ” ಎಂದು ಪರಿದಾ ಹೇಳಿದರು. “ಅಪರಾಧಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಡಳಿತಕ್ಕೆ ನಿರ್ದೇಶನ ನೀಡಲಾಗಿದೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯನ್ನೂ ಹೊಂದಿರುವ ಪರಿದಾ ಟ್ವೀಟ್ ಮಾಡಿದ್ದಾರೆ.
