ಮೈಸೂರು: ರಾಜ್ಯವನ್ನು ಬೆಚ್ಚಿ ಬೀಳಿಸುವಂತಹ ಭೀಕರ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ನಡೆದಿದೆ. ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ 43 ವರ್ಷದ ಹರೀಶ್ ಎಂಬಾತ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ನ್ಯೂ ಮಾರುತಿ ಬಡಾವಣೆಯಲ್ಲಿ 43 ವರ್ಷದ ಹರೀಶ್ ಎಂಬಾತ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ತಿಳಿಯುತ್ತಿದ್ದಂತೆ ಹುಣಸೂರು ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಸಾವಿನ ನಿಖರ ಕಾರಣ ಪತ್ತೆಗೆ ತನಿಖೆ ಆರಂಭಿಸಿದ್ದಾರೆ
ಮಾಹಿತಿ ತಿಳಿಯುತ್ತಿದ್ದಂತೆ ಹುಣಸೂರು ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕುಟುಂಬ ಕಲಹವೇ ಘಟನೆಗೆ ಕಾರಣವೇ ಅಥವಾ ಬೇರೆ ಯಾವುದೇ ಹಿನ್ನೆಲೆ ಇದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಸ್ಥಳಕ್ಕೆ ಮೈಸೂರು ಎಸ್ಪಿ ಮಲ್ಲಿಕಾರ್ಜುನ ಬಾಲದಂಡೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಎಲ್ಲ ಆಯಾಮಗಳಿಂದ ತನಿಖೆ ಮುಂದುವರಿಸಿದ್ದಾರೆ. ಮೃತರ ಕುಟುಂಬದ ಸದಸ್ಯರು ಹಾಗೂ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.ಘಟನೆಯ ನಿಖರ ಕಾರಣ ಮರಣೋತ್ತರ ಪರೀಕ್ಷೆ, ತಾಂತ್ರಿಕ ಸಾಕ್ಷ್ಯಗಳು ಹಾಗೂ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ. ಸದ್ಯ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಲ್ಲ ಆಯಾಮಗಳಿಂದ ತನಿಖೆ ಮುಂದುವರಿದಿದೆ. ಪೊಲೀಸರು ಅಧಿಕೃತ ಮಾಹಿತಿ ನೀಡುವವರೆಗೆ ಘಟನೆ ಕುರಿತು ಯಾವುದೇ ಊಹಾಪೋಹಗಳಿಗೆ ಅವಕಾಶ ನೀಡದಂತೆ ಮನವಿ ಮಾಡಿದ್ದಾರೆ.

