ಶಿವಮೊಗ್ಗ: ರಾಜ್ಯದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಮದುವೆಯಾದ ಮರುದಿನವೇ ಹೃದಯಾಘಾತದಿಂದ ಯುವಕ ಮೃತಪಟ್ಟಿದ್ದಾರೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಹನುಮಂತಾಪುರದ ಯುವಕ ಮದುವೆಯಾದ ಮರುದಿನವೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರಮೇಶ್(30) ಮೃತಪಟ್ಟವರು. ಭಾನುವಾರ ಹರಪನಹಳ್ಳಿ ಸಮೀಪದ ಬಂಡ್ರಿಯ ಯುವತಿಯನ್ನು ರಮೇಶ್ ಮದುವೆಯಾಗಿದ್ದರು. ವಧುವಿನ ಮನೆಗೆ ನವ ದಂಪತಿ ತೆರಳಿದ್ದಾರೆ. ದೇವರ ಕೋಣೆಗೆ ಹೋಗಿ ಕೈಮುಗಿದು ಹೊರ ಬರುತ್ತಿದ್ದಂತೆ ರಮೇಶ್ ಹೃದಯಾಘಾತದಿಂದ ಕುಸಿತು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆದಾಗಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ. ಮಂಗಳವಾರ ಹೊಳೆಹೊನ್ನೂರು ಸಮೀಪದ ಹೊಸಕೊಪ್ಪದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.
