ದಾವಣಗೆರೆ: ಮರೇನಹಳ್ಳಿಯಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಚಿರತೆ ದಾಳಿಯಿಂದ ರೈತ ಗಾಯಗೊಂಡಿದ್ದಾರೆ.
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಮರೇನಹಳ್ಳಿಯಲ್ಲಿ ಘಟನೆ ನಡೆದಿದೆ. ಚಿರತೆ ದಾಳಿಯಿಂದ ಹೊನ್ನೂರಪ್ಪ ಎಂಬುವರು ಗಾಯಗೊಂಡಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುವಾಗ ಚಿರತೆ ಏಕಾಏಕಿ ದಾಳಿ ಮಾಡಿದೆ. ಗಾಯಗೊಂಡ ಹೊನ್ನೂರಪ್ಪ ಅವರನ್ನು ಜಗಳೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.