HomeLatest NewsSHOCKING: ಮನೆ ಬಳಿ ನಿಂತಿದ್ದ ಮಗುವನ್ನು ತಂದೆ ಎದುರಲ್ಲೇ ಎಳೆದೊಯ್ದು ಕೊಂದ ಚಿರತೆ

SHOCKING: ಮನೆ ಬಳಿ ನಿಂತಿದ್ದ ಮಗುವನ್ನು ತಂದೆ ಎದುರಲ್ಲೇ ಎಳೆದೊಯ್ದು ಕೊಂದ ಚಿರತೆ

ಚಿಕ್ಕಮಗಳೂರು: ಚಿರತೆ ದಾಳಿಗೆ ಐದು ವರ್ಷದ ಮಗು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಸಮೀಪದ ನವಿಲೇಕಲ್ಲುಗುಡ್ಡ ಗ್ರಾಮದಲ್ಲಿ ನಡೆದಿದೆ.

ಮನೆಗೆ ಹಿಂದೆ ನಿಂತಿದ್ದ ಮಗುವನ್ನು ತಂದೆಯ ಮುಂದೆಯೇ ಚಿರತೆ ಹೊತ್ತುಕೊಂಡು ಹೋಗಿದೆ. ಕೂಲಿ ಕಾರ್ಮಿಕ ಬಸವರಾಜ್ ಎಂಬುವರ ಪುತ್ರಿ 5 ವರ್ಷದ ಸಾನ್ವಿ ಮೃತಪಟ್ಟಿದ್ದಾಳೆ. ಕುತ್ತಿಗೆಗೆ ಬಾಯಿ ಹಾಕಿ ಚಿರತೆ ಮಗುವನ್ನು ಕೊಂದಿದೆ. ಕೂಗಾಡುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದೆ ಎನ್ನಲಾಗಿದೆ.

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕುಮ್ಮತ್ತಗಿರಿ ನಿವಾಸಿಯಾಗಿರುವ ಬಸವರಾಜ್ ಕುಟುಂಬದವರು ಕೂಲಿ ಕೆಲಸಕ್ಕಾಗಿ ಇಲ್ಲಿಗೆ ಬಂದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆಯೂ ಹಲವು ಬಾರಿ ಚಿರತೆ ದಾಳಿ ಮಾಡಿತ್ತು. ಚಿರತೆ ಸೆರೆಗಾಗಿ ನೂರಾರು ಬಾರಿ ಸ್ಥಳೀಯರು ಮನವಿ ಮಾಡಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಗು ಬಲಿಯಾಗಿದೆ. ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular