HomeLatest NewsSHOCKING: ಹಾಸನದ ಕಲ್ಲು ಕ್ವಾರಿಯಲ್ಲಿ ಭಾರೀ ದುರಂತ, ದೊಡ್ಡ ಬಂಡೆ ಕುಸಿದು 5 ಕಾರ್ಮಿಕರು ಗಂಭೀರ

SHOCKING: ಹಾಸನದ ಕಲ್ಲು ಕ್ವಾರಿಯಲ್ಲಿ ಭಾರೀ ದುರಂತ, ದೊಡ್ಡ ಬಂಡೆ ಕುಸಿದು 5 ಕಾರ್ಮಿಕರು ಗಂಭೀರ

ಹಾಸನ: ಕಲ್ಲು ಗಣಿಗಾರಿಕೆ ವೇಳೆ ದೊಡ್ಡ ಬಂಡೆ ಕುಸಿತವಾಗಿದ್ದು, 5 ಕಾರ್ಮಿಕರ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ತಾಲೂಕಿನ ದೂಮಗೆರೆ ಗ್ರಾಮದಲ್ಲಿ ನಡೆದಿದೆ.

ಕಲ್ಲುಕ್ವಾರಿಯಲ್ಲಿ ನಡೆದ ಅವಘಡದಲ್ಲಿ ಗಾಯಗೊಂಡ ನಾಲ್ವರು ಕೂಲಿ ಕಾರ್ಮಿಕರು ಹಾಸನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ಕೂಲಿ ಕಾರ್ಮಿಕರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಗಾಯಗೊಂಡ ಐವರು ಕಾರ್ಮಿಕರು ಚಾಮರಾಜನಗರ ಮೂಲದವರಾಗಿದ್ದಾರೆ. ಇನ್ನೂ ಕೆಲವು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಹಾಸನದ ಬಂಡೆ ದೇವರಾಜ್ ಗೆ ಸೇರಿದ ಕಲ್ಲು ಕ್ವಾರಿಯಲ್ಲಿ ಘಟನೆ ನಡೆದಿದೆ. ಬೆಳಗ್ಗೆ ಭಾರಿ ದುರಂತ ಸಂಭವಿಸಿದರೂ ಮುಚ್ಚಿಟ್ಟಿರುವ ಆರೋಪ ಕೇಳಿ ಬಂದಿದೆ. ಹಾಸನದ ಖಾಸಗಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ಸತ್ಯಭಾಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಶಾಂತಿ ಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular