HomeLatest NewsSHOCKING: ಮಂಗಳೂರಿನಲ್ಲಿ ಬೀದಿ ನಾಯಿ ದಾಳಿಗೆ ವ್ಯಕ್ತಿ ಬಲಿ: ಕಣ್ಣುಗುಡ್ಡೆಯನ್ನೇ ಕಿತ್ತು ತಿಂದ ಶ್ವಾನ

SHOCKING: ಮಂಗಳೂರಿನಲ್ಲಿ ಬೀದಿ ನಾಯಿ ದಾಳಿಗೆ ವ್ಯಕ್ತಿ ಬಲಿ: ಕಣ್ಣುಗುಡ್ಡೆಯನ್ನೇ ಕಿತ್ತು ತಿಂದ ಶ್ವಾನ

ಮಂಗಳೂರು: ಮಂಗಳೂರು ಹೊರ ವಲಯದಲ್ಲಿ ಬೀದಿ ನಾಯಿ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಆಘಾತಕಾರಿ ಘಟನೆಯಲ್ಲಿ ಮೃತ ವ್ಯಕ್ತಿಯ ಕಣ್ಣುಗುಡ್ಡೆಯನ್ನೇ ದಾಳಿ ಮಾಡಿದ ನಾಯಿ ತಿಂದು ಹಾಕಿದೆ.

ದಯಾನಂದ್(60) ಮೃತಪಟ್ಟ ವ್ಯಕ್ತಿ. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಕುಂಪಲ ಬೈಪಾಸ್ ಸಮೀಪ ಜನವಸತಿ ಪ್ರದೇಶದಲ್ಲಿ ರಕ್ತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬೀದಿ ನಾಯಿಯನ್ನು ಪುರಸಭೆ ಸಿಬ್ಬಂದಿ ಹಿಡಿದಿದ್ದಾರೆ.

ಕುಂಪಲ ನಿವಾಸಿ ದಯಾನಂದ್ ಅವಿವಾಹಿತರಾಗಿದ್ದು, ಮದ್ಯ ಸೇವಿಸುತ್ತಿದ್ದರು. ಸ್ಥಳೀಯವಾಗಿ ನೇಮ, ಕೋಲ, ಜಾತ್ರೆಗಳಿಗೆ ಹೋಗಿ ಕುಂಪಲದ ಅಂಗಡಿ ಮುಂಭಾಗ ಮಲಗಿ ಬೆಳಗ್ಗೆ ಮನೆ ಸೇರುತ್ತಿದ್ದರು. ಇಂದು ಬೆಳಗಿನ ಜಾವ ಅಂಗಡಿಯೊಂದರ ಮುಂಭಾಗ ದಯಾನಂದ್ ಇದ್ದಿದ್ದನ್ನು ಅಂಗಡಿಯ ಮಾಲೀಕ ವಿನೋದ್ ನೋಡಿದ್ದಾರೆ. ಬೆಳಗ್ಗೆ 7.30 ರ ಸುಮಾರಿಗೆ ಅಂಗಡಿಯೊಂದರ ಬಳಿ ರಕ್ತಸಿಕ್ತವಾಗಿದ್ದ ಕಣ್ಣುಗುಡ್ಡೆ ಕಂಡುಬಂದಿದೆ. ಮತ್ತಷ್ಟು ಹುಡುಕಾಟ ಪರಿಶೀಲನೆ ನಡೆಸಿದಾಗ ಅಂಗಡಿ ಸಮೀಪದ ಮನೆಯೊಂದರ ಬಳಿ ದಯಾನಂದ್ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅದರ ಪಕ್ಕದಲ್ಲಿ ನಾಯಿ ಕೂಡ ಕಂಡುಬಂದಿದ್ದು, ನಾಯಿ ದಾಳಿ ಮಾಡಿ ಕೊಂದು ಹಾಕಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular