SHOCKING: ಜಮೀನಿನಲ್ಲೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಮೈಸೂರು: ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಭೋಗೇಶ್ವರ ಕಾಲೋನಿ ನಿವಾಸಿ ಮುಕುಂದ ಮೃತಪಟ್ಟವರು.

ಭೋಗೇಶ್ವರ ಕಾಲೋನಿಯಲ್ಲಿ ವಾಸವಿದ್ದ ಮುಕುಂದ(38) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 7 ತಮಿಳುನಾಡಿನ ನೀಲಗಿರಿ ಜಿಲ್ಲೆ ಗುಡ್ಲೂರು ತಾಲೂಕಿನ ಪಂಡನತೊರೆಯ್ ಗ್ರಾಮದ ಮುಕುಂದ 7 ವರ್ಷದಿಂದ ಇಲ್ಲೇ ನೆಲೆಸಿದ್ದ. ಜಮೀನು ಭೋಗ್ಯಕ್ಕೆ ಪಡೆದುಕೊಂಡು ವ್ಯವಸಾಯ ಮಾಡಿಕೊಂಡಿದ್ದ. ಮಾನಸಿಕ ಸ್ಥಿಮಿತ ಕಳೆದುಕೊಂಡು ಮುಕುಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ತಾಯಿಗೆ ಕರೆ ಮಾಡಿ ವಾಪಸ್ ಕರೆಸಿಕೊಳ್ಳುವಂತೆ ಮುಕುಂದ ಮನವಿ ಮಾಡಿಕೊಂಡಿದ್ದ. ನನಗೆ ಇಲ್ಲಿರಲು ಆಗುತ್ತಿಲ್ಲ. ವಾಪಸ್ ಊರಿಗೆ ಕರೆದುಕೊಂಡು ಹೋಗಿ ಎಂದು ಹೇಳಿದ್ದ. ಮನೆಯವರು ಬರುವಷ್ಟರಲ್ಲಿ ಜಮೀನಿನಲ್ಲಿ ಕತ್ತು ಕೊಯ್ದುಕೊಂಡಿದ್ದ ಮುಕುಂದನನ್ನು ಸ್ಥಳೀಯರು ತಕ್ಷಣ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ತಮಿಳುನಾಡಿನ ಮುಕುಂದ ಮೃತಪಟ್ಟಿದ್ದಾನೆ. ಹೆಚ್.ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read