HomeLatest NewsSHOCKING: ದೆಹಲಿ ಕೆಂಪುಕೋಟೆ ಬಳಿ ಭಾರೀ ಸ್ಪೋಟ: 9 ಜನ ಬಲಿ

SHOCKING: ದೆಹಲಿ ಕೆಂಪುಕೋಟೆ ಬಳಿ ಭಾರೀ ಸ್ಪೋಟ: 9 ಜನ ಬಲಿ

ನವದೆಹಲಿ: ದೆಹಲಿ ಕೆಂಪುಕೋಟೆ ಸಮೀಪದ ಮೆಟ್ರೋ ಸ್ಟೇಷನ್ 1ರ ಬಳಿ ಭಾರೀ ಸ್ಪೋಟ ಸಂಭವಿಸಿದ್ದು, 9 ಜನ ಬಲಿಯಾಗಿದ್ದಾರೆ.

ಬಾಂಬ್ ಸ್ಫೋಟ ಹಿನ್ನೆಲೆ ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಎನ್ಐಎ ಮತ್ತು ಎಸ್.ಎಸ್.ಜಿ. ಪಡೆ, ಶ್ವಾನದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿವೆ.

ದೆಹಲಿ ಮುಂಬೈ ಸೇರಿ ಹಲವೆಡೆ ಹೈಅಲರ್ಟ್  ಘೋಷಣೆ ಮಾಡಲಾಗಿದೆ. ಕೆಂಪುಕೋಟೆ ಸುತ್ತಮುತ್ತಲಿನ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಚಾಂದಿನಿ ಚೌಕ್, ಮಾರ್ಕೆಟ್ ರಸ್ತೆ, ಸಂಸತ್ ಭವನ, ಇಂಡಿಯಾ ಗೇಟ್ ಸುತ್ತ ಹೈ ಅಲರ್ಟ್ ಘೋಷಿಸಲಾಗಿದ್ದು, ಹೆಚ್ಚುವರಿ ಭದ್ರತೆ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಂಪುಕೋಟೆ ಸುತ್ತಲಿನ ರಸ್ತೆಗಳನ್ನು ಬಂದು ಮಾಡಲಾಗಿದೆ. ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಒಂದರ ಬಳಿ ಸ್ಪೋಟ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ವಾಹನಗಳು ಛಿದ್ರವಾಗಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಸ್ಪೋಟದ ಬಳಿಕ ಕಾರ್ ಹೊತ್ತಿ ಉರಿದಿದ್ದರಿಂದ ಒಂಬತ್ತಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ. ಆರು ಕಾರುಗಳು, ಮೂರು ಆಟೋ ಸೇರಿದಂತೆ 9ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಸುಟ್ಟು ಕರಕಲಾಗಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular