ಬೆಂಗಳೂರು : ಕಳೆದ ಐದು ವರ್ಷದಲ್ಲಿ ಕರ್ನಾಟಕದಲ್ಲಿ 14,000 ಕ್ಕೂ ಹೆಚ್ಚು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಅಪಹರಿಸಲ್ಪಡುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ, ಇದು ಪೋಷಕರ ಆತಂಕಕ್ಕೆ ಕಾರಣವಾಗಿದೆ – 2020 ರಿಂದ, ಕರ್ನಾಟಕದಾದ್ಯಂತ 114,878 ಮಕ್ಕಳನ್ನು ಅಪಹರಿಸಲಾಗಿದೆ,ಈ ಪೈಕಿ 9789 ಬಾಲಕಿಯರನ್ನು ಅಪಹರಿಸಿದ್ದಾರೆ.
2025 ರ ಮೊದಲ ಏಳು ತಿಂಗಳಲ್ಲಿ ರಾಜ್ಯವು ಈಗಾಗಲೇ ೧,೩೧೮ ಅಪಹರಣ ಪ್ರಕರಣಗಳನ್ನು ದಾಖಲಿಸಿರುವುದು ಸಮಸ್ಯೆಯ ಗಂಭೀರತೆಯನ್ನು ಸ್ಪಷ್ಟಪಡಿಸುತ್ತದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ವಿಧಾನಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. 2025 ರಲ್ಲಿ ರಾಜ್ಯದಲ್ಲಿ ದಾಖಲಾದ 589 ಅಪಹರಣ ಪ್ರಕರಣಗಳು ಬೆಂಗಳೂರಿನಲ್ಲಿ ನಡೆದಿವೆ ಎಂದು ತಿಳಿಸಲಾಗಿದೆ.
ಕೆಲವು ವಾರಗಳ ಹಿಂದೆ ಬೆಂಗಳೂರಿನಲ್ಲಿ 13 ವರ್ಷದ ಬಾಲಕನ ಅಪಹರಣ ಮತ್ತು ನಂತರದ ಕೊಲೆ ಕೋಲಾಹಲ ಎಬ್ಬಿಸಿತ್ತು. ಬೆಂಗಳೂರು ಹೊರತುಪಡಿಸಿ, ತುಮಕೂರು, ಮಂಡ್ಯ, ಚಿತ್ರದುರ್ಗ ಮತ್ತು ದೆಹಲಿಯಲ್ಲಿ ಅಪಹರಣ ಪ್ರಕರಣಗಳಲ್ಲಿ ಆತಂಕಕಾರಿ ಏರಿಕೆ ಕಂಡುಬಂದಿದೆ.
2020ರಿಂದ ಈವರೆಗೂ ರಾಜ್ಯದಲ್ಲಿ 14,878 ಮಕ್ಕಳು ನಾಪತ್ತೆ ಪ್ರಕರಣ ದಾಖಲಾಗಿದ್ದು, ಈ ಪೈಕಿ 13,542 ಮಕ್ಕಳನ್ನು ಪತ್ತೆ ಹಚ್ಚಲಾಗಿದೆ. ಬಾಕಿ 1,336 ಮಕ್ಕಳು ನಿಗೂಢವಾಗಿದ್ದಾರೆ. ಅಪಹರಣಕ್ಕೆ ಒಳಗಾದ 10,792 ಹೆಣ್ಣು ಮಕ್ಕಳ ಪೈಕಿ 1,003 ಮಂದಿ ಕಾಣೆಯಾಗಿದ್ದಾರೆ. 4,086 ಗಂಡು ಮಕ್ಕಳ ಪೈಕಿ 333 ಮಕ್ಕಳು ನಿಗೂಢವಾಗಿದ್ದಾರೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.