ಬೆಂಗಳೂರು: ನವಜಾತ ಶಿಶುವಿಗೂ ಹೃದಯಘಾತವಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ನವಜಾತ ಶಿಶುವಿಗೆ ಹೃದಯಘಾತವಾಗಿದ್ದು, ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದ್ದು, ಶಿಶು ಆರೋಗ್ಯವಾಗಿದೆ.
ಮೂಡಿಗೆರೆಯ ರಘು, ಸುಷ್ಮಾ ದಂಪತಿಯ ಮಗು ಹೃದಯಾಘಾತಕ್ಕೆ ಒಳಗಾಗಿದೆ. ಸುಷ್ಮಾ ಹಾಸನದ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದು, ಮಗು ಜನಿಸಿದ ಕೆಲ ಗಂಟೆಗಳ ನಂತರ ಹೃದಯಾಘಾತವಾಗಿದೆ.
ಮಗುವನ್ನು ಮೂರು ಗಂಟೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತಜ್ಞ ವೈದ್ಯರ ತಂಡ ತಕ್ಷಣವೇ ಚಿಕಿತ್ಸೆ ಆರಂಭಿಸಿ ಮಗುವಿನ ಪ್ರಾಣ ಉಳಿಸಿದ್ದಾರೆ.