SHOCKING NEWS: ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯನ್ನೇ ಇರಿದು ಕೊಂದ ರೋಗಿ

ಕೊಟ್ಟಾಯಂ: ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯನ್ನೇ ಕುಡುಕ ರೋಗಿ ಇರಿದು ಕೊಂದ ಘಟನೆ ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟರಕ್ಕಾರ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

ವಂದನಾ ದಾಸ್ (23) ಕೊಲೆಯಾದ ವೈದ್ಯೆ. ಕುಡುಕ ರೋಗಿ 42 ವರ್ಷದ ಸಂದೀಪ್ ಈ ಕೃತ್ಯವೆಸಗಿದ್ದಾನೆ. ನಿನ್ನೆ ಕುಟುಂಬದ ಜೊತೆ ಜಗಳ ಮಾಡಿಕೊಂಡಿದ್ದ ಸಂದೀಪ್, ಕಾಲಿಗೆ ಗಾಯಮಾಡಿಕೊಂಡಿದ್ದರಿಂದ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದ.

ಈ ವೇಳೆ ತನಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯೆ ವಂದನಾ ಅವರನ್ನು ಕತ್ತರಿ, ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ವಂದನಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read