SHOCKING NEWS: ಬೆಂಗಳೂರಿನಲ್ಲಿ ಹಾಡ ಹಗಲೇ ಮಚ್ಚು, ಲಾಂಗು ಹಿಡಿದು ಪುಡಿರೌಡಿಗಳ ಅಟ್ಟಹಾಸ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡ ಹಗಲೇ ಪುಡಿರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. ನಡು ರಸ್ತೆಯಲ್ಲೇ ಮಚ್ಚು, ಲಾಂಗ್ ಗಳನ್ನು ಹಿಡಿದು ಹೊಡೆದಾಡಿಕೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಯುವಕರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಹಾಡ ಹಗಲೇ ಯುವಕರು ಮಚ್ಚು ಹಿಡಿದು ಹೊಡೆದಾಡಿಕೊಳ್ಳುವುದನ್ನ ಕಂಡ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ಗಾಂಜಾ ಮತ್ತಿನಲ್ಲಿ ಯುವಕರ ಗುಂಪು ಈ ರೀತಿ ಹೊಡೆದಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಸಾರ್ವಜನಿಕವಾಗಿ ನಡು ರಸ್ತೆಯಲ್ಲಿ ಪುಡಿರೌಡಿಗಳು ಈ ರೀತಿ ಕತ್ತಿ ಬೀಸುತ್ತಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಂಬುದು ಎಲ್ಲಿಗೆ ಬಂದು ನಿಂತಿದೆ? ಜನರ ಸುರಕ್ಷತೆ ಗತಿಯೇನು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read