SHOCKING NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಬರೋಬ್ಬರಿ 595 ಅಪಘಾತ; 158 ಜನರು ಬಲಿ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಎಐ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ವಾಹನಗಳ ವೇಗಕ್ಕೂ ಬ್ರೇಕ್ ಹಾಕಲಾಗಿದೆ.

ಎಕ್ಸ್ ಪ್ರೆಸ್ ವೇನಲ್ಲಿ ಕಳೆದ 9 ತಿಂಗಳಲ್ಲಿ 590ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ರಾಮನಗರ ಜಿಲ್ಲೆಯ 55 ಕೀ.ಮಿ, ಮಂಡ್ಯದಲ್ಲಿ 58 ಕಿ.ಮೀ ಹಾಗೂ ಮೈಸೂರಿನಲ್ಲಿ 5 ಕಿ.ಮೀ ಸೇರಿ ಒಟ್ಟು 118 ಕಿ.ಮೀ ದೂರದ ದಶಪಥ ಹೆದ್ದಾರಿಯಲ್ಲಿ 2022ರ ಸೆಪ್ಟೆಂಬರ್ ನಿಂದ 2023ರ ಜೂನ್ ವರೆಗೆ 595 ಅಪಘಾತಗಳು ಸಂಭವಿಸಿವೆ.

ಅಪಘಾತದಲ್ಲಿ ಈವರೆಗೆ 158 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕೇವಲ ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿಯೇ ಜನವರಿಯಿಂದ ಈವರೆಗೆ 55 ಜನರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 52 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದೇ ವೇಳೆ ಬೈಪಾಸ್ ರಸ್ತೆಯಲ್ಲಿ 269 ಅಪಘಾತಗಳಾಗಿದ್ದು, 92 ಜನರು ಮೃತಪಟ್ಟಿದ್ದಾರೆ ಎಂಬ ಆಘಾತಕಾರಿ ವಿಷಯ ಹೊರಬಿದ್ದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read