HomeKarnatakaSHOCKING NEWS: ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧೆ ಕುಸಿದು ಬಿದ್ದು ಸಾವು

SHOCKING NEWS: ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧೆ ಕುಸಿದು ಬಿದ್ದು ಸಾವು

ಬೆಳಗಾವಿ: ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು, ಈ ಮಧ್ಯೆ ಕೆಲ ಮತಗಟ್ಟೆ ಕೇಂದ್ರಗಳಲ್ಲಿ ದುರಂತಗಳು ಸಂಭವಿಸಿವೆ. ಮತದಾನಕ್ಕೆಂದು ಬಂದಿದ್ದ ವೃದ್ಧೆ ಮತಗಟ್ಟೆಯಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯರಝರ್ವಿ ಗ್ರಾಮದಲ್ಲಿ ನಡೆದಿದೆ.

ಪಾರವ್ವ ಸಿದ್ನಾ (70) ಮೃತ ಮಹಿಳೆ. ಮತದಾನ ಮಾಡಲೆಂದು ಮತಗಟ್ಟೆಗೆ ಆಗಮಿಸಿದ್ದ ಪಾರವ್ವ, ಮತದಾನ ಮಾಡಲೆಂದು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಲೊ ಬಿಪಿಯಿಂದಾಗಿ ಪಾರವ್ವಾ ಸಿದ್ನಾ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular