SHOCKING NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಪ್ರಕರಣ; ಕಳೆದೊಂದು ವರ್ಷದಲ್ಲಿ 90,000ಕ್ಕೂ ಹೆಚ್ಚು ಕೇಸ್ ದಾಖಲು

ಬೆಂಗಳೂರು: ರಾಜ್ಯದ ಜನರು ಬೆಚ್ಚಿ ಬೀಳುವಂತಹ ಸುದ್ದಿ ಹೊರಬಿದ್ದಿದೆ. ಕರ್ನಾಟಕದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿದೆ. ವರ್ಷದಿಂದ ವರ್ಷಕ್ಕೆ ದಾಖಲಾಗುತ್ತಿರುವ ಕ್ಯಾನ್ಸರ್ ಪೀಡಿತರ ಸಂಖ್ಯೆ ಆಘಾತವನ್ನುಂಟು ಮಾಡುವಂತಿದೆ.

ಕರ್ನಾಟಕದಲ್ಲಿ ಕ್ಯಾನ್ಸರ್ ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ ಎಂಬ ಆತಂಕಕಾರಿ ವಿಷಯವನ್ನು ಲೋಕಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವ ಎಸ್.ಪಿ.ಸಿಂಗ್ ತಿಳಿಸಿದ್ದಾರೆ. ಸಂಸತ್ ಅಧಿವೇಶದಲ್ಲಿ ಈ ವಿಚಾರ ಚರ್ಚೆಯಾಗಿದೆ.

ಕರ್ನಾಟಕದಲ್ಲಿ ಕ್ಯಾನ್ಸರ್ ಪ್ರಕರಣ ನಿರಂತರವಾಗಿ ಏರುತ್ತಿದೆ. 2020ರಲ್ಲಿ ಕ್ಯಾನ್ಸರ್ ಪ್ರಕರಣ ಅಂದಾಜು 85,968 ರಷ್ಟಿತ್ತು. 2021ರಲ್ಲಿ 88,126ಕ್ಕೆ ಏರಿಕೆಯಾಗಿದೆ. 2022ರಲ್ಲಿ 90,349 ಪ್ರಕರಣಗಳು ದಾಖಲಾಗಿವೆ.

ಅಷ್ಟೇ ಅಲ್ಲ ಕಳೆದ ಮೂರು ವರ್ಷಗಳಲ್ಲಿ ಕ್ಯಾನ್ಸರ್ ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಕರ್ನಾಟಕದಲ್ಲಿ ಹೆಚ್ಚಾಗಿದೆ. 2020ರಲ್ಲಿ 47,113 ಸಾವಿನ ವರದಿಯಾಗಿತ್ತು. 2021ರಲ್ಲಿ 48,290ಕ್ಕೆ ಏರಿಕೆಯಾಗಿದೆ. 2022ರಲ್ಲಿ ಕ್ಯಾನ್ಸರ್ ನಿಂದ ಸಾವನ್ನಪ್ಪಿದವರ ಸಂಖ್ಯೆ 49,516ಕ್ಕೆ ಏರಿಕೆಯಾಗಿದೆ. ಕ್ಯಾನ್ಸರ್ ಪ್ರಕರಣ ಹಾಗೂ ಮರಣ ಪ್ರಮಾಣದಲ್ಲಿ ತಮಿಳುನಾಡಿನ ಬಳಿಕ ಕರ್ನಾಟಕ 2ನೇ ಸ್ಥಾನದಲ್ಲಿದೆ.

ಇನ್ನು ಈ ಬಗ್ಗೆ ಮಾತನಾಡಿರುವ ಕಿದ್ವಾಯಿ ಸಂಸ್ಥೆ ಮಾಜಿ ನಿರ್ದೇಶಕ ಡಾ.ರಾಮಚಂದ್ರ, ತಡವಾದ ಸ್ಕ್ರೀನಿಂಗ್ ಹಾಗೂ ರೋಗನಿರ್ಣಯ ಹೆಚ್ಚಿನ ಸಾವಿಗೆ ಕಾರಣವಾಗುತ್ತಿದೆ. ಅದರಲ್ಲಿಯೂ ಕೋಲಾರ, ಚಿಕ್ಕಬಳ್ಳಾಪುರ, ವಿಜಯಪುರ, ಕಲಬುರ್ಗಿ, ತಮಿಳುನಾಡು, ಆಂಧ್ರಪ್ರದೇಶದ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಕ್ಯಾನ್ಸರ್ ಪ್ರಕರಣ ಕಂಡು ಬರುತ್ತಿದೆ ಎಂದು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read