ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಐದು ವರ್ಷಗಳಲ್ಲಿ ಸುಮಾರು 219 ಬಾಲಕಿಯರು ಹೆರಿಗೆ ಮಾಡಿಸಿಕೊಂಡಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.
ಬಾಲ್ಯ ವಿವಾಹ ನಿಷೇಧದ ನಡುವೆಯೂ ಕೊಪ್ಪಳ ಜಿಲ್ಲೆಯಲ್ಲಿ 219 ಬಾಲಕಿಯರು ಗರ್ಭಿಣಿಯರಾಗಿದ್ದು, ಕಳೆದ ಐದು ವರ್ಷಗಳಲ್ಲಿ ಹೆರಿಗೆ ಮಾಡಿಸಿಕೊಂಡ ಅಘಾತಕಾರಿ ಅಂಶ ಬೆಳಕಿಗೆ ಬಂದಿದೆ.
2019-20 ರಲ್ಲಿ 30 ಇದ್ದ ಬಾಲಗರ್ಭಿಣಿಯರ ಸಂಖ್ಯೆ 2023-24 ರಲ್ಲಿ 66 ಆಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಕೇವಲ ಜಿಲ್ಲಾಸ್ಪತ್ರೆ ಹಾಗೂ ಆಸ್ಪತ್ರೆಗೆ ಬಂದಿರುವ ಪ್ರಕರಣಗಳ ಲೆಕ್ಕಾಚಾರದಂತೆ ಇಷ್ಟು ಬಾಲಕಿಯರು ಗರ್ಭಿಣಿಯರಾಗಿದ್ದರು ಎಂಬುದು ಪತ್ತೆಯಾಗಿದೆ.