HomeLatest Newsಬೆಲೆ ಏರಿಕೆ, ಶುಲ್ಕ ಹೆಚ್ಚಳ ಹೊತ್ತಲ್ಲೇ ಶಾಲಾ ಮಕ್ಕಳ ಪೋಷಕರಿಗೆ ಶಾಕಿಂಗ್ ನ್ಯೂಸ್: ಪಠ್ಯಪುಸ್ತಕ ದರ...

ಬೆಲೆ ಏರಿಕೆ, ಶುಲ್ಕ ಹೆಚ್ಚಳ ಹೊತ್ತಲ್ಲೇ ಶಾಲಾ ಮಕ್ಕಳ ಪೋಷಕರಿಗೆ ಶಾಕಿಂಗ್ ನ್ಯೂಸ್: ಪಠ್ಯಪುಸ್ತಕ ದರ ಶೇ. 10 ರಷ್ಟು ಹೆಚ್ಚಳ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ರಾಜ್ಯ ಸರ್ಕಾರ ಸರಬರಾಜು ಮಾಡುವ ಪಠ್ಯಪುಸ್ತಕದ ಬೆಲೆ ಕೂಡ ಶೇಕಡ 10ರಷ್ಟು ಹೆಚ್ಚಳವಾಗಿದೆ.

ಇದರಿಂದ ವಿದ್ಯಾರ್ಥಿಗಳ ಪ್ರವೇಶ ಶುಲ್ಕದ ಮೇಲೆಯೂ ಪರಿಣಾಮ ಬೀರಲಿದ್ದು, ಪೋಷಕರಿಗೆ ಆರ್ಥಿಕ ಹೊರೆ ಹೆಚ್ಚಾಗುತ್ತದೆ. ಕರ್ನಾಟಕ ಪಠ್ಯಪುಸ್ತಕ ಸಂಘವು ಶಾಲೆಗಳ ಬೇಡಿಕೆಗೆ ಅನುಗುಣವಾಗಿ ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳನ್ನು ಮುದ್ರಿಸಿ ಶಾಲೆಗಳಿಗೆ ವಿತರಿಸುತ್ತದೆ. ಸರ್ಕಾರಿ ಶಾಲೆಗಳಿಗೆ ಉಚಿತವಾಗಿ, ಖಾಸಗಿ ಶಾಲೆಗಳಿಗೆ ನಿಗದಿತ ದರ ಪಡೆದು ಪುಸ್ತಕಗಳನ್ನು ನೀಡಲಾಗುವುದು.

ಕಳೆದ ವರ್ಷ 34 ರೂಪಾಯಿ ಇದ್ದ ಪುಸ್ತಕದ ದರ ಈ ವರ್ಷ 36 ರೂಪಾಯಿಗೆ ಏರಿಕೆಯಾಗಿದೆ. ಕೆಲವು ಪುಸ್ತಕಗಳ ದರ ಶೇಕಡ 100ರಷ್ಟು ಏರಿಕೆಯಾಗಿದೆ. ಆಂಗ್ಲ ಭಾಷೆಯ ಪುಸ್ತಕ ಕಳೆದ ವರ್ಷ 25 ರೂಪಾಯಿ ಇದ್ದು, ಈ ವರ್ಷ 51 ರೂಪಾಯಿಗೆ ಏರಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದೊಂದು ಪುಸ್ತಕ ಶೀರ್ಷಿಕೆ ಒಂದೊಂದು ದರದಲ್ಲಿ ಏರಿಕೆಯಾಗಿದೆ. 14 ಶೀರ್ಷಿಕೆಗಳು 1ರಿಂದ 17 ರೂಪಾಯಿ, 86 ಶೀರ್ಷಿಕೆಗಳು 1 ರಿಂದ 27 ರೂ. ವರೆಗೆ ಹೆಚ್ಚಳ ಮಾಡಲಾಗಿದೆ. ಪಠ್ಯ ಪುಸ್ತಕಗಳ ಒಟ್ಟಾರೆ ಏರಿಕೆಯ ಪ್ರಮಾಣ ನೋಡಿದಾಗ ಶೇಕಡ 10ರಷ್ಟು ಹೆಚ್ಚಳ ಆಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular