HomeKarnatakaಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಡುಗೆ ಎಣ್ಣೆ, ಬೇಳೆ ಕಾಳು ಸೇರಿ ಅಗತ್ಯ ವಸ್ತು ಬೆಲೆ ಡಿಢೀರ್...

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಡುಗೆ ಎಣ್ಣೆ, ಬೇಳೆ ಕಾಳು ಸೇರಿ ಅಗತ್ಯ ವಸ್ತು ಬೆಲೆ ಡಿಢೀರ್ ಏರಿಕೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಹಿನ್ನೆಲೆಯಲ್ಲಿ ಅಡುಗೆ ಅನಿಲ ಮತ್ತು ವಾಣಿಜ್ಯ ಬಳಕೆ ಸಿಲಿಂಡರ್ ಗಳ ಕೊರತೆ ಎದುರಾಗಿದೆ. ಇದರ ಬೆನ್ನಲ್ಲೇ ದಿಢೀರನೆ ಅಡುಗೆ ಎಣ್ಣೆ, ಬೇಳೆ ಕಾಳು ಸೇರಿದಂತೆ ಅಗಸ್ತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ.

ಯುಗಾದಿ, ರಂಜಾನ್ ಹಬ್ಬಗಳು ಸಮೀಪಿಸುತ್ತಿರುವ ಹೊತ್ತಲ್ಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿರುವುದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಯುಗಾದಿ, ರಂಜಾನ್ ಜೊತೆಗೆ ಊರ ಹಬ್ಬ, ಜಾತ್ರೆಗಳು ಕೂಡ ಇರುವುದರಿಂದ ಜನ ಹೆಚ್ಚಾಗಿ ದಿನಸಿ ಖರೀದಿಸುತ್ತಿದ್ದಾರೆ.

ಹಬ್ಬಗಳ ಕಾರಣ ಮುಂಜಾಗ್ರತೆ ಕ್ರಮವಾಗಿ ಸಾಮಾನ್ಯ ಜನರು ಈಗಿನಿಂದಲೇ ದಿನಸಿ ಖರೀದಿಸತೊಡಗಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ದಿನಸಿ, ಇತರೆ ಅಂಗಡಿಗಳಲ್ಲಿ ಅಡುಗೆ, ಎಣ್ಣೆ ಬೇಳೆ ಕಾಳುಗಳು ಅಗತ್ಯ ವಸ್ತುಗಳು ಸೇರಿದಂತೆ ಹಬ್ಬಕ್ಕೆ ಬೇಕಾದ ಸಾಮಗ್ರಿ ಖರೀದಿಸುತ್ತಿದ್ದಾರೆ. ಬೆಲೆ ಏರಿಕೆಯಿಂದ ಕೆಳ ಮಧ್ಯಮ ವರ್ಗದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಕ್ಕಿ, ಬೆಲ್ಲ, ಅಡುಗೆ ಎಣ್ಣೆ, ಬೇಳೆ ಕಾಳು ಸೇರಿ ಇನ್ನಿತರ ಪದಾರ್ಥಗಳ ಬೆಲೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಉತ್ಪಾದನೆ ಕುಂಠಿತ, ಇರಾನ್, ಅಮೆರಿಕ-ಇಸ್ರೇಲ್ ಸಂಘರ್ಷ ಪರಿಣಾಮ ಅಗತ್ಯ ವಸ್ತು ಪೂರೈಕೆಯಲ್ಲಿ ವ್ಯತ್ಯಯವಾಗಿ ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular