HomeLatest Newsಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಕ್ಕಿ ಬೆಲೆ ಏರಿಕೆ ಸಾಧ್ಯತೆ

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಕ್ಕಿ ಬೆಲೆ ಏರಿಕೆ ಸಾಧ್ಯತೆ

ರಾಜ್ಯದಲ್ಲಿ ಅತ್ಯಧಿಕ ಭತ್ತ ಬೆಳೆಯುವ ಅಚ್ಚುಕಟ್ಟು ಪ್ರದೇಶವಾದ ತುಂಗಭದ್ರಾ ಜಲಾಶಯ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಬೇಸಿಗೆ ಬೆಳಗೆ ನೀರು ಬಿಡುವುದಿಲ್ಲ ಎಂದು ಸರ್ಕಾರ ಅಧಿಕೃತ ಘೋಷಣೆ ಮಾಡಿದೆ. ಇದರ ಪರಿಣಾಮ ಭತ್ತ ಮತ್ತು ಅಕ್ಕಿ ಬೆಲೆ ಏರಿಕೆಯಾಗುವ ಮುನ್ಸೂಚನೆ ಕಂಡು ಬಂದಿದೆ.

ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಸೇರಿ 12.5 ಲಕ್ಷಕ್ಕೂ ಎಕರೆ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. 2.5 ಕೋಟಿ ಕ್ವಿಂಟಲ್ ಭತ್ತ ಉತ್ಪಾದನೆ ಸಾಮರ್ಥ್ಯ ಹೊಂದಿರುವ ಈ ಪ್ರದೇಶದಲ್ಲಿ ಈ ಬಾರಿ ಬೆಳೆ ಬೆಳೆಯುವುದಿಲ್ಲ. ಇದು ಮಾರುಕಟ್ಟೆಯ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.

ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಬೆಳೆಯುವ ಭತ್ತದ ಬೆಳೆ ಕರ್ನಾಟಕ ಸೇರಿದಂತೆ ನೆರೆ ರಾಜ್ಯಗಳ ಬಹುತೇಕ ಅಕ್ಕಿಯ ಬೇಡಿಕೆ ಈಡೇರಿಸುತ್ತದೆ. ವಿವಿಧ ರಾಷ್ಟ್ರಗಳಿಗೂ ಇಲ್ಲಿನ ಅಕ್ಕಿ ರಫ್ತು ಮಾಡಲಾಗುತ್ತದೆ. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ದುರಸ್ತಿ ಕಾರಣದಿಂದ ಬೇಸಿಗೆ ಬೆಳೆಗೆ ನೀರು ಬಿಡುವುದಿಲ್ಲ ಎಂದು ಸರ್ಕಾರ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದ ಸಹಜವಾಗಿ ಮಾರುಕಟ್ಟೆಯಲ್ಲಿ ಭತ್ತ, ಅಕ್ಕಿ ದರ ಏರಿಕೆಯಾಗುವ ಸಾಧ್ಯತೆ ಇದೆ. ಬೇಸಿಗೆ ಬೆಳೆಗೆ ನೀರು ಬಿಡುವುದಿಲ್ಲ ಎಂದು ಸರ್ಕಾರ ಹೇಳುತ್ತಿದ್ದಂತೆ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಆರ್.ಎನ್.ಆರ್. ಭತ್ತದ ದರ 75 ಕೆಜಿಗೆ 1950-2000 ರೂ. ವರೆಗೆ ಏರಿಕೆಯಾಗಿದೆ. ಸೋನಾ ಮಸೂರಿ ದರ ಕೂಡ ಏರಿಕೆ ಆಗುವ ಸಾಧ್ಯತೆ ಇದೆ. ಕೆಲವು ದಲ್ಲಾಳಿಗಳು ಮುಂಗಾರು ಬೆಳೆ ಕಟಾವು ಪ್ರಾರಂಭವಾಗುತ್ತಿದ್ದಂತೆ ಭತ್ತ, ಅಕ್ಕಿಸಂಗ್ರಹಿಸಿ ಅಭಾವ ಸೃಷ್ಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular