ಪೆಟ್ರೋಲ್ – ಡೀಸೆಲ್ ದರ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ಸುದ್ದಿ: ಕಚ್ಚಾ ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸದ್ಯಕ್ಕಿಲ್ಲ ಪರಿಷ್ಕರಣೆ

Oil nears $90 for first time in 2023, reduces chances of a petrol, diesel price change in India

ಕಳೆದ ಕೆಲ ತಿಂಗಳುಗಳಿಂದ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದ ಕಾರಣ ಇದಕ್ಕೆ ಅನುಗುಣವಾಗಿ ಭಾರತದಲ್ಲಿ ಪೆಟ್ರೋಲ್ – ಡೀಸೆಲ್ ದರವೂ ಇಳಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ವಾಹನ ಸವಾರರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ.

ರಷ್ಯಾ ಹಾಗೂ ಸೌದಿ ಅರೇಬಿಯಾ ಈ ವರ್ಷದ ಅಂತ್ಯದವರೆಗೆ ಕಚ್ಚಾ ತೈಲ ಉತ್ಪಾದನೆ ಹಾಗೂ ರಫ್ತು ಕಡಿತವನ್ನು ಮುಂದುವರಿಸಲು ತೀರ್ಮಾನಿಸಿರುವ ಪರಿಣಾಮವಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 90 ಡಾಲರ್ ಸನಿಹಕ್ಕೆ ಬಂದಿದ್ದು, ಇದರಿಂದಾಗಿ ತೈಲ ಕಂಪನಿಗಳು ದೇಶಿಯ ಮಾರುಕಟ್ಟೆಯಲ್ಲಿ ಸದ್ಯಕ್ಕೆ ಪೆಟ್ರೋಲ್ – ಡೀಸೆಲ್ ದರ ಪರಿಷ್ಕರಣೆ ಮಾಡುವುದು ಅನುಮಾನ ಎಂದು ಹೇಳಲಾಗಿದೆ.

ಮೇ ಮತ್ತು ಜೂನ್ ತಿಂಗಳಿನಲ್ಲಿ ಕಚ್ಚಾತೈಲದ ಬೆಲೆ ಸರಾಸರಿ 73 ರಿಂದ 75 ಡಾಲರ್ ಮಧ್ಯೆ ಇದ್ದ ಕಾರಣ ಕಳೆದ 17 ತಿಂಗಳಿನಿಂದ ಪರಿಷ್ಕರಣೆ ಮಾಡದೆ ಕೈಬಿಟ್ಟಿದ್ದ ಪೆಟ್ರೋಲ್ – ಡೀಸೆಲ್ ದರವನ್ನು ಅಂತರಾಷ್ಟ್ರೀಯ ಮಾರುಕಟ್ಟೆ ಬೆಲೆ ಆಧರಿಸಿ ಪರಿಷ್ಕರಣೆ ಮಾಡುವ ವ್ಯವಸ್ಥೆ ಮತ್ತೆ ಜಾರಿಗೆ ಬರುವುದರ ಮೂಲಕ ಪೆಟ್ರೋಲ್ – ಡೀಸೆಲ್ ಬೆಲೆ ಇಳಿಕೆ ಕಾಣಬಹುದು ಎಂಬ ನಿರೀಕ್ಷೆ ಈಗ ಹುಸಿಯಾಗುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read