HomeLatest NewsSHOCKING: ಕಣ್ಣಿಗೆ ಖಾರದಪುಡಿ ಎರಚಿ, ಕೈಕಾಲು ಕಟ್ಟಿ ಹಾಕಿ 10 ಬಾರಿ ಇರಿದು ಓಂಪ್ರಕಾಶ್ ಹತ್ಯೆ:...

SHOCKING: ಕಣ್ಣಿಗೆ ಖಾರದಪುಡಿ ಎರಚಿ, ಕೈಕಾಲು ಕಟ್ಟಿ ಹಾಕಿ 10 ಬಾರಿ ಇರಿದು ಓಂಪ್ರಕಾಶ್ ಹತ್ಯೆ: ಉಸಿರು ನಿಲ್ಲುವವರೆಗೂ ಕಾದು ನಿಂತಿದ್ದ ಪತ್ನಿ

ಬೆಂಗಳೂರು: ಕಣ್ಣಿಗೆ ಖಾರದಪುಡಿ ಎರಚಿ, ಮೈಮೇಲೆ ಎಣ್ಣೆ ಸುರಿದು, ಕೈಕಾಲು ಕಟ್ಟಿ ಹಾಕಿ ಎಂಟರಿಂದ ಹತ್ತು ಬಾರಿ ಇರಿದು ನಿವೃತ್ತ ಡಿಜಿ ಐಜಿಪಿ ಓಂ ಪ್ರಕಾಶ್ ಅವರನ್ನು ಕೊಲೆ ಮಾಡಲಾಗಿದೆ.

ಓಂ ಪ್ರಕಾಶ್ ಎದೆ, ಹೊಟ್ಟೆಗೆ ಚಾಕುವಿನಿಂದ ಇರಿಯಲಾಗಿದ್ದು, ರಕ್ತದ ಮಡುವಿನಲ್ಲಿ ಒದ್ದಾಡಿ ನಿವೃತ್ತ ಓಂ ಪ್ರಕಾಶ್ ಪ್ರಾಣ ಬಿಟ್ಟಿದ್ದು, ಗಂಡನ ಉಸಿರು ನಿಲ್ಲುವವರೆಗೂ ಪತ್ನಿ ಕಾದು ನಿಂತಿದ್ದರು. ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸೇಂಟ್ ಜಾನ್ಸ್ ಆಸ್ಪತ್ರೆಗೆ ಮೃತ ದೇಹವನ್ನು ರವಾನೆ ಮಾಡಲಾಗಿದ್ದು, ಇಂದು ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಯಲಿದೆ. ಮರಣೋತ್ತರ ಪರೀಕ್ಷೆ ನಂತರ ಕುಟುಂಬದವರಿಗೆ ಮೃತದೇಹ ಹಸ್ತಾಂತರ ಮಾಡಲಾಗುವುದು. ನಿನ್ನೆ ಸಂಜೆಯೇ ಮೃತದೇಹವನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮಡಿವಾಳ ಎಸಿಪಿ ವಾಸುದೇವ್ ಹೆಗಲಿಗೆ ತನಿಖೆಯ ಹೊಣೆ ವಹಿಸಲಾಗಿದೆ. ಓಂ ಪ್ರಕಾಶ್ ಪದ್ಮಿನಿ ಮತ್ತು ಪುತ್ರಿ ಕೃತಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ವಿಚಾರಣೆಯ ನಂತರ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಓಂ ಪ್ರಕಾಶ್, ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಸಂಜೆ ವೇಳೆಗೆ ಪತ್ನಿ ಮತ್ತು ಪುತ್ರಿಯನ್ನು ಕೋರ್ಟ್ಗೆ ಹಾಜರುಪಡಿಸಲಾಗುವುದು. ಆಸ್ತಿ ವಿಚಾರಕ್ಕೆ ಪತ್ನಿ ಕೊಲೆ ಮಾಡಿರುವ ಶಂಕೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular