SHOCKING: ಈ ಮಕ್ಕಳ ತಂದೆ ನಾನಲ್ಲವೆಂದ ಪತಿ; ಸಿಟ್ಟಿಗೆದ್ದು ನವಜಾತ ಶಿಶುಗಳನ್ನು ಹತ್ಯೆಗೈದ ಪತ್ನಿ

ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರಿಗೆ ಅವಳಿ ಹೆಣ್ಣು ಮಕ್ಕಳು ಜನಿಸಿದ್ದು, ಆದರೆ ಆಕೆಯ ಪತಿ ಈ ಮಕ್ಕಳ ತಂದೆ ನಾನಲ್ಲ ಎಂದು ಹೇಳಿದ ಕಾರಣ ಸಿಟ್ಟಿಗೆದ್ದು ನವಜಾತ ಶಿಶುಗಳ ಕತ್ತು ಸೀಳಿ ಹತ್ಯೆ ಮಾಡಿದ್ದಾಳೆ.

ಪ್ರಕರಣದ ವಿವರ: ಮಹಿಳೆಯ ಪತಿ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದು, ಮೂರು ತಿಂಗಳ ಹಿಂದೆ ಭಾರತಕ್ಕೆ ಮರಳಿದ್ದ. ಇದಾದ ಕೆಲ ವಾರಗಳ ಬಳಿಕ ಮಹಿಳೆಗೆ ಅವಳಿ ಮಕ್ಕಳು ಜನಿಸಿದ್ದು, ಆ ಸಂದರ್ಭದಲ್ಲಿ ಪತಿ, ಈ ಮಕ್ಕಳಿಗೆ ನಾನು ತಂದೆಯಲ್ಲ. ನೀನು ಅನೈತಿಕ ಸಂಬಂಧ ಹೊಂದಿದ್ದೀಯ ಎಂದು ಆರೋಪಿಸಿದ್ದಾನೆ.

ಇದರಿಂದ ಆಕ್ರೋಶಗೊಂಡ ಮಹಿಳೆ ತನ್ನ ಅವಳಿ ಹೆಣ್ಣು ಮಕ್ಕಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕತ್ತು ಸೀಳಿ ಹತ್ಯೆ ಮಾಡಿದ್ದಾಳೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೊದಲಿಗೆ ಮಹಿಳೆಯ ಪತಿ ಮೇಲೆ ಅನುಮಾನ ವ್ಯಕ್ತವಾಗಿತ್ತು. ಹೆಚ್ಚಿನ ವಿಚಾರಣೆ ನಡೆಸಿದಾಗ ಅಸಲಿ ಸಂಗತಿ ಬಹಿರಂಗವಾಗಿದ್ದು, ಇದೀಗ ಆರೋಪಿ ಮಹಿಳೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read