ಮಂಗಳೂರು: ಮದರಂಗಿ ಶಾಸ್ತ್ರದ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿಯೇ ಕುಸಿದು ಬಿದ್ದು ನಿರೂಪಕ ಮೃತಪಟ್ಟಿದ್ದಾರೆ.
ಅಶ್ವಿಥ್(32) ಮೃತಪಟ್ಟವರು. ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಯುವ ನಿರೂಪಕ ಅಶ್ವಿಥ್ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಸಂಬಂಧಿಕರ ಮನೆಯಲ್ಲಿ ಮದರಂಗಿ ಶಾಸ್ತ್ರದ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದರುಲ
ವೇದಿಕೆ ಏರಿ ಕಾರ್ಯಕ್ರಮ ಆರಂಭಿಸುತ್ತಿದ್ದಂತೆ ಅವರು ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಈ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

