SHOCKING: ದೇವಾಲಯ ಸಮೀಪದ ಪಾರ್ಕ್ ನಲ್ಲೇ ರಾಸಲೀಲೆ..! ವೇಶ್ಯಾವಾಟಿಕೆ ತಾಣವಾದ ಉದ್ಯಾನವನ

ರಾಯಚೂರು: ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ದೇವರಭೂಪುರ ಗ್ರಾಮದ ಅಮರೇಶ್ವರ ದೇವಾಲಯದ ಪುಣ್ಯ ಸ್ಥಳದ ಉದ್ಯಾನವನದಲ್ಲಿ ಜೋಡಿಯೊಂದು ರಾಸಲೀಲೆ ನಡೆಸಿದೆ.

ದೇವಾಲಯಕ್ಕೆ ಬರುವ ಜನರ ವಿಶ್ರಾಂತಿಗಾಗಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಉದ್ಯಾನವನ ನಿರ್ಮಿಸಲಾಗಿದೆ. ಆದರೆ ಇದು ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಸೂಕ್ತ ನಿರ್ವಹಣೆ ಇಲ್ಲದೆ ಹಾಳಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಈ ಕುರಿತಾಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಅನೈತಿಕ ಚಟುವಟಿಕೆಯ ವಿಡಿಯೋ ಸಹಿತ ಲಿಂಗಸಗೂರು ಸಹಾಯಕ ಆಯುಕ್ತರಿಗೆ ದೂರು ನೀಡಲಾಗಿದೆ.

ಭಕ್ತರು, ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಿದ ಪಾರ್ಕ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ. ಇದು ತಲೆತಗ್ಗಿಸುವ ವಿಚಾರವಾಗಿದೆ. ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುವ ಹೊರಗುತ್ತಿಗೆ ನೌಕರರು 10 ರೂಪಾಯಿ ಪ್ರವೇಶ ದರವಿದ್ದರೂ ಹೆಚ್ಚಿನ ಹಣ ಪಡೆದು ಇಂತಹ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಉದ್ಯಾನವನದಲ್ಲಿ ಅನೈತಿಕ ಚಟುವಟಿಕೆ, ವೇಶ್ಯಾವಾಟಿಕೆ ನಡೆಸಲು ಅವಕಾಶ ನೀಡುತ್ತಿರುವ ಬಗ್ಗೆ ಮೇಲಾಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಘಟನೆ ದೂರು ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read