HomeLatest NewsSHOCKING: ಸಿನಿಮಾ ಚಿತ್ರೀಕರಣ ವೇಳೆಯಲ್ಲೇ ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಿರ್ದೇಶಕ ಸಾವು

SHOCKING: ಸಿನಿಮಾ ಚಿತ್ರೀಕರಣ ವೇಳೆಯಲ್ಲೇ ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಿರ್ದೇಶಕ ಸಾವು

ಶಿವಮೊಗ್ಗ: ಸಿನಿಮಾ ಚಿತ್ತೀಕರಣ ವೇಳೆಯಲ್ಲಿ ಹೃದಯಾಘಾತದಿಂದ ನಿರ್ದೇಶಕ ಸಾವನ್ನಪ್ಪಿದ್ದಾರೆ. ಸ್ಯಾಂಡಲ್ವುಡ್ ನಿರ್ದೇಶಕ ಸಂಗೀತ್ ಸಾಗರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹರಿಹರಪುರದಲ್ಲಿ ಸಿನಿಮಾ ಚಿತ್ತೀಕರಣದ ವೇಳೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

‘ಪಾತ್ರಧಾರಿ’ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದಾಗ ಹೃದಯಾಘಾತ ಸಂಭವಿಸಿದೆ. ‘ಪಾತ್ರಧಾರಿ’ ಸಿನಿಮಾದ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕರಾಗಿದ್ದರು. ಅವರು ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ದೊಡ್ಡನಾಗರ ಮೂಲದವರಾಗಿದ್ದಾರೆ. 20 ದಿನದಿಂದ ಹರಿಹರಪುರ ತೀರ್ಥಹಳ್ಳಿ ಸುತ್ತಮುತ್ತ ಚಿತ್ರೀಕರಣ ನಡೆಯುತ್ತಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular