HomeLatest NewsSHOCKING: ರಾಜ್ಯದಲ್ಲಿ ಬಿಸಿಲಾಘಾತಕ್ಕೆ ಎರಡನೇ ಬಲಿ: ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

SHOCKING: ರಾಜ್ಯದಲ್ಲಿ ಬಿಸಿಲಾಘಾತಕ್ಕೆ ಎರಡನೇ ಬಲಿ: ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

ಬೆಳಗಾವಿ: ರಾಜ್ಯದಲ್ಲಿ ಬಿಸಿಲಾಘಾತಕ್ಕೆ ಎರಡನೇ ಬಲಿಯಾಗಿದೆ. ಬೆಳಗಾವಿ ಜಿಲ್ಲೆ ರಾಯಭಾಗ ಪಟ್ಟಣದ ನಿವಾಸಿ ವೆಂಕಟೇಶ್ ಬಳ್ಳಾರಿ(35) ಮೃತಪಟ್ಟವರು ಎಂದು ಹೇಳಲಾಗಿದೆ.

ವೆಂಕಟೇಶ್ ಬಳ್ಳಾರಿ ರಾಯಭಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಏಪ್ರಿಲ್ 21ರಂದು ಬಸವೇಶ್ವರ ಜಯಂತಿಯ ಸಂದರ್ಭದಲ್ಲಿ ಮೆರವಣಿಗೆ ವೇಳೆ ತಲೆ ತಿರುಗಿ ಕುಸಿದು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವೆಂಕಟೇಶ್ ಅವರು ಬಿಸಿಲಿನ ತಾಪ ತಾಳದೆ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಬೀದರ್ ಜಿಲ್ಲೆಯ ಕಮಲನಗರದಲ್ಲಿ 20 ವರ್ಷದ ಯುವಕ ಉತ್ತರ ಪ್ರದೇಶ ಮೂಲದ ಮೊಹ್ಮದ್ ಸಮೀರ್, ಬಿಸಿಲಿನ ತಾಪ ತಾಳಲಾರದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular