SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಪತ್ನಿಯ ಶೀಲ ಶಂಕಿಸಿ ಚಿತ್ರಹಿಂಸೆ ನೀಡಿ ಹತ್ಯೆಗೈದ ಪಾಪಿ ಪತಿ..!

ಬೆಂಗಳೂರು : ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅವಳನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾಳೆ.

ಪತ್ನಿ ಶೀಲ ಶಂಕಿಸಿದ ಪತಿ ಆಕೆಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ.
ನೃತ್ಯ ಶಿಕ್ಷಕಿ ನವ್ಯಶ್ರೀ (25) ಕೊಲೆಯಾಗಿದ್ದು, ಈಕೆ ತನ್ನ ಪತಿ ಕಿರಣ್ ಜೊತೆ ಕೆಂಗೇರಿ ಉಪನಗರದ ಎಸ್ಎಂವಿ ಲೇಔಟ್ನಲ್ಲಿ ವಾಸಿಸುತ್ತಿದ್ದರು. ಅವರು ಮದುವೆಯಾಗಿ ಮೂರು ವರ್ಷಗಳಾಗಿತ್ತು. ಪತ್ನಿ ನವ್ಯಾ ಕೊರಿಯಾಗ್ರಫರ್ ಆಗಿ ಕೆಲಸ ಮಾಡುತ್ತಿದ್ದರು. ನವ್ಯಶ್ರೀ ಅವರ ಪತಿ ಕಿರಣ್ ತನ್ನ ಹೆಂಡತಿಯ ಮೇಲೆ ಅನುಮಾನ ವ್ಯಕ್ತಪಡಿಸಿ ಕುರ್ಚಿಗೆ ಕಟ್ಟಿ, ಚಿತ್ರಹಿಂಸೆ ನೀಡಿ ನಂತರ ಕೊಲ್ಲಲಾಗಿದೆ ಎಂದು ಮೂಲಗಳು ತಿಳಿಸಿವೆ.

ನವ್ಯಾಶ್ರೀ ಸ್ನೇಹಿತೆ ಐಶ್ವರ್ಯಾ ನೀಡಿದ ದೂರಿನ ಆಧಾರದ ಮೇಲೆ ಪತಿ ಕಿರಣ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 103 (1) ಅಡಿಯಲ್ಲಿ ಕೆಂಗೇರಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read