ಬೆಂಗಳೂರು : ಬೆಂಗಳೂರಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಸ್ಕ್ಯಾನಿಂಗ್ ಗೆ ಬಂದ ಮಹಿಳೆಗೆ ರೇಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿದ್ದಾನೆ.
ಸ್ಕ್ಯಾನಿಂಗ್ ನೆಪದಲ್ಲಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿದ್ದಾನೆ ಎನ್ನಲಾಗಿದ್ದು, ಈ ಸಂಬಂಧ ಅನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಹೊಟ್ಟೆ ನೋವೆಂದು ಪತಿ ಜೊತೆ ಮಹಿಳೆ ಸ್ಕ್ಯಾನಿಂಗ್ ಸೆಂಟರ್ ಗೆ ಹೋಗಿದ್ದಳು. ಸ್ಕ್ಯಾನಿಂಗ್ ನೆಪದಲ್ಲಿ ರೇಡಿಯಾಲಜಿಸ್ಟ್ ಜಯಕುಮಾರ್ ಮಹಿಳೆ ಖಾಸಗಿ ಅಂಗ ಸ್ಪರ್ಶಿಸಿದ್ದಾನೆ ಎನ್ನಲಾಗಿದೆ. ಇದಕ್ಕೆ ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ. ಘಟನೆ ಬಳಿಕ ಪೊಲೀಸರಿಗೆ ಮಹಿಳೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನ ಠಾಣೆಗೆ ಕರೆಸಿ ಬಿಟ್ಟು ಕಳುಹಿಸಿದ್ದಾರೆ ಎನ್ನಲಾಗಿದೆ.
