HomeKarnatakaSHOCKING : ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಕೃತ್ಯ : ಪಾರ್ಟಿ ನೆಪದಲ್ಲಿ ಯುವತಿಗೆ ಲೈಂಗಿಕ ದೌರ್ಜನ್ಯ, ಐವರ...

SHOCKING : ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಕೃತ್ಯ : ಪಾರ್ಟಿ ನೆಪದಲ್ಲಿ ಯುವತಿಗೆ ಲೈಂಗಿಕ ದೌರ್ಜನ್ಯ, ಐವರ ಬಂಧನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದ ಘಟನೆ ಬೆಳಕಿಗೆ ಬಂದಿದೆ. ಪಾರ್ಟಿಗೆ ಆಹ್ವಾನಿಸಿ ಯುವತಿಯನ್ನು ಕರೆಸಿಕೊಂಡ ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ತಲಘಟ್ಟಪುರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಸಂತ್ರಸ್ತೆಗೆ ಆರೋಪಿಗಳಲ್ಲಿ ಇಬ್ಬರು ಮೊದಲಿನಿಂದಲೇ ಪರಿಚಯಸ್ಥರಾಗಿದ್ದರು. ಅವರಲ್ಲಿ ಒಬ್ಬನಾದ ಸೋಮಶೇಖರ್, “ಕಲಬುರ್ಗಿಯಿಂದ ಸ್ನೇಹಿತರು ಬಂದಿದ್ದಾರೆ, ಪಾರ್ಟಿಗೆ ಬಾ” ಎಂದು ಹೇಳಿ ಯುವತಿಯನ್ನು ಕರೆಸಿಕೊಂಡಿದ್ದಾನೆ. ದೇವನಹಳ್ಳಿ ಮೂಲದ ಯುವತಿ ಸ್ನೇಹಿತನ ಮಾತನ್ನು ನಂಬಿ ನಿಗದಿತ ಸ್ಥಳಕ್ಕೆ ತೆರಳಿದ್ದಾಳೆ.

ಸಂಜೆ ವೇಳೆ ನಡೆದ ಪಾರ್ಟಿಯಲ್ಲಿ ಐವರು ಯುವಕರು ಸೇರಿಕೊಂಡಿದ್ದರು. ಇದೇ ವೇಳೆ ಆರೋಪಿಗಳಲ್ಲಿ ಒಬ್ಬನಾದ ಅಂಬರೀಶ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಿಂದ ಆತಂಕಗೊಂಡ ಯುವತಿ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಹೊರಬಂದಿದ್ದು, ತಕ್ಷಣವೇ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಮಾಹಿತಿ ಪಡೆದ ತಲಘಟ್ಟಪುರ ಠಾಣೆ ಪೊಲೀಸರು ತಕ್ಷಣ ಸ್ಥಳಕ್ಕೆ ತೆರಳಿ ಯುವತಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಬಳಿಕ ಪರಾರಿಯಾಗಲು ಯತ್ನಿಸುತ್ತಿದ್ದ ಸೋಮಶೇಖರ್, ಅಂಬರೀಶ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಗಾಗಿ ಪೊಲೀಸರು ನಿರೀಕ್ಷಿಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಮಹಜರು ನಡೆಸಿರುವ ತನಿಖಾ ತಂಡ, ಪ್ರಕರಣದ ಎಲ್ಲಾ ಆಯಾಮಗಳ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular