HomeLatest NewsSHOCKING: ಆಸ್ತಿ ವಿಚಾರಕ್ಕೆ ತಂದೆಯನ್ನೇ ಬರ್ಬರವಾಗಿ ಕೊಂದ ಪುತ್ರ

SHOCKING: ಆಸ್ತಿ ವಿಚಾರಕ್ಕೆ ತಂದೆಯನ್ನೇ ಬರ್ಬರವಾಗಿ ಕೊಂದ ಪುತ್ರ

ಯಾದಗಿರಿ: ಆಸ್ತಿ ವಿಚಾರಕ್ಕೆ ತಂದೆಯನ್ನೇ ಪುತ್ರ ಬರ್ಬರವಾಗಿ ಕೊಲೆ ಮಾಡಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಡ್ನಾಳ ಗ್ರಾಮದ ಹೊರವಲಯದಲ್ಲಿ ಭಾನುವಾರ ನಡೆದಿದೆ.

ಹಳಿಸಗರ ಗ್ರಾಮದ ಯಂಕಪ್ಪ ಮ್ಯಾಕಲದಿನ್ನಿ(70) ಹತ್ಯೆಯಾದವರು. ಆಸ್ತಿ ವಿಚಾರಕ್ಕೆ ಅವರ ಪುತ್ರ ನಾಗಪ್ಪ ಕೊಲೆ ಮಾಡಿದ್ದಾನೆ. ತಂದೆ -ಮಗನ ನಡುವೆ ಆಸ್ತಿ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಯಂಕಪ್ಪ ಜಮೀನಿನಲ್ಲಿ ಕೆಲಸ ಮಾಡುವಾಗ ಆಸ್ತಿ ವಿಚಾರಕ್ಕೆ ಜಗಳ ತೆಗೆದ ನಾಗಪ್ಪ ಚೂಪಾದ ಕಬ್ಬಿಣದ ಪಟ್ಟಿಯಿಂದ ಬಲವಾಗಿ ತಲೆಗೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ಯಂಕಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಲೆ ಮಾಡಿದ ನಂತರ ನಾಗಪ್ಪ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular