ಗದಗ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದಲ್ಲಿ ನಡೆದಿದೆ.
ಪಟ್ಟಣದ ಅನ್ನದಾನೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತ ಕನ್ನಡದಲ್ಲಿ 60, ಇಂಗ್ಲೀಷ್ ನಲ್ಲಿ 48 ಅಂಕ ಪಡೆದುಕೊಂಡಿದ್ದು, ಉಳಿದ ಎಲ್ಲಾ ವಿಷಯದಲ್ಲಿ ಫೇಲ್ ಆಗಿದ್ದನು. ಫಲಿತಾಂಶ ಬಂದ ದಿನದಿಂದ ಇದನ್ನೇ ಮನಸ್ಸಿಗೆ ಹಚ್ಚಿಕೊಂಡಿದ್ದನು. ಇದೇ ವಿಷಯಕ್ಕೆ ಬಾಲಕ ನರೇಗಲ್ ಬಸ್ ನಿಲ್ದಾಣದ ಆವರಣದಲ್ಲಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಕೇಶ್ ಉತ್ತಮ ಕಬಡ್ಡಿ ಆಟಗಾರನಾಗಿದ್ದು, ಸಹಪಾಠಿಗಳು ಕಂಬನಿ ಮಿಡಿದಿದ್ದಾರೆ.