ರಾಯಚೂರು: ಮನೆ ಮುಂದೆ ಆಟವಾಡುತ್ತಿದ್ದ ಬಾಲಕನನ್ನು ಬೀದಿ ನಾಯಿಗಳು ಕಚ್ಚಿ ಎಳೆದಾಡಿದ ಘಟನೆ ರಾಯಚೂರು ತಾಲೂಕಿನ ದೇವಸುಗೂರಿನ ಮೂರನೇ ವಾರ್ಡಿನಲ್ಲಿ ನಡೆದಿದೆ.
ಬೀದಿ ನಾಯಿಗಳ ದಾಳಿಯಿಂದ ಬಾಲಕ ನಿಖಿಲ್ ಕೈಗೆ ಗಂಭೀರ ಗಾಯವಾಗಿದೆ. ಬಾಲಕನ ರಕ್ಷಣೆಗೆ ಮುಂದಾಗಿದ್ದ ವೃದ್ಧೆ ಮೇಲೆಯೂ ಬೀದಿ ನಾಯಿಗಳು ದಾಳಿ ನಡೆಸಿದ್ದು, ಗಾಯಗೊಂಡ ಬಾಲಕ ಮತ್ತು ವೃದ್ಧೆಯನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮಂಗಳವಾರ ನಡೆದ ಬೀದಿ ನಾಯಿಗಳ ದಾಳಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.