HomeLatest NewsSHOCKING: ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

SHOCKING: ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಬೆಳಗಾವಿ: ಶಾಲೆಯಲ್ಲಿ ಆಟವಾಡುವಾಗ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ.

ಬೇಡರಹಟ್ಟಿ ಗ್ರಾಮದ ರೇಣುಕಾ ಸಂಜಯ ಬಂಡಗಾರ(15) ಮೃತಪಟ್ಟ ವಿದ್ಯಾರ್ಥಿನಿ. ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ರೇಣುಕಾ ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿನಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಅಥಣಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ರೇಣುಕಾ ಮೃತಪಟ್ಟಿದ್ದಾರೆ. ಪುತ್ರಿಯನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular