SHOCKING : ರಾಜ್ಯದಲ್ಲಿ ಹೆಚ್ಚುತ್ತಿದೆ ವಿದ್ಯಾರ್ಥಿಗಳ ಆತ್ಮಹತ್ಯೆ : ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ‘SSLC’ ವಿದ್ಯಾರ್ಥಿನಿ ಸೂಸೈಡ್.!

ಬೆಂಗಳೂರು : ರಾಜ್ಯದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ನಿನ್ನೆಯಷ್ಟೇ ಬೆಂಗಳೂರಿನಲ್ಲಿ 13 ವರ್ಷದ ಬಾಲಕ ಸೂಸೈಡ್ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿತ್ತು. ಈ ಬೆನ್ನಲ್ಲೇ ಎಸ್ ಎಸ್ ಎಲ್ ವಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹನುಮಂತ ನಗರದ ಶ್ರೀ ನಗರದಲ್ಲಿ ನಡೆದಿದೆ.

ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಭೂಮಿಕಾ ಎಂಬ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸೂಸೈಡ್ ಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಪರೀಕ್ಷೆಗೆ ಓದಲು ರೂಮ್ ಗೆ ತೆರಳಿದ್ದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಂಗಿಯ ಮುಂದೆಯೇ ಸೂಸೈಡ್

ಉಡದಾರರಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಧ್ರುವ (13) ಎಂದು ಗುರುತಿಸಲಾಗಿದೆ. ಈತ ಉಡದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 9 ವರ್ಷದ ತಂಗಿಯ ಮುಂದೆಯೇ ಅಣ್ಣ ಸೂಸೈಡ್ ಮಾಡಿಕೊಂಡಿದ್ದಾನೆ. ಬಾಲಕ ಹೆಚ್ಚಾಗಿ ಮೊಬೈಲ್ ಬಳಸುತ್ತಿದ್ದನು ಎನ್ನಲಾಗಿದೆ. ಈ ವಿಚಾರಕ್ಕೆ ಸೂಸೈಡ್ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read