ಬೆಂಗಳೂರು: ಪಟಾಕಿ ಬಾಕ್ಸ್ ಸ್ಪೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದ್ದು, ಪೊಲೀಸ್ ಕಾನ್ಸ್ಟೇಬಲ್ ಸೇರಿದಂತೆ ಐವರು ಗಾಯಗೊಂಡ ಘಟನೆ ನಡೆದಿದೆ.
ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುತ್ತೂರು ನಿವಾಸಿ ತನುಷ್ ರಾವ್(15) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಫ್ರೆಂಡ್ಸ್ ಯುವಕರ ಬಳಗದಿಂದ ಪ್ರತಿಷ್ಠಾಪಿಸಿದ್ದ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಘಟನೆ ನಡೆದಿದೆ. ಮೆರವಣಿಗೆ ಮಾಡುತ್ತಿದ್ದ ಲಿಫ್ಟಿಂಗ್ ವಾಹನದಲ್ಲಿ ಪಟಾಕಿ ಬಾಕ್ಸ್ ಗಳನ್ನು ಇಡಲಾಗಿತ್ತು.
ಲಿಫ್ಟಿಂಗ್ ವಾಹನದ ಸೈಲೆನ್ಸರ್ ಬಿಸಿಯಿಂದಾಗಿ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ. ಗಣೇಶ್(16), ಯೋಗೇಶ್(15), ಮುನಿರಾಜು(27), ನಾಗರಾಜು(35) ಚೇತನ್ ಶಾವಿ(13) ಕಾನ್ಸ್ಟೇಬಲ್ ಜಾಕಿರ್ ಹುಸೇನ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಸಿಡಿಸಲು ತರಲಾಗಿದ್ದ ಪಟಾಕಿ ಬಾಕ್ಸ್ ಸ್ಪೋಟಗೊಂಡು ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.