ಬೆಂಗಳೂರು : ರಾಜ್ಯದಲ್ಲಿ ಸರಣಿ ಹೃದಯಾಘಾತ ಪ್ರಕರಣಗಳು ನಿಲ್ಲುವ ಹಾಗೆ ಕಾಣುತ್ತಿಲ್ಲ. ಇಂದು ಒಂದೇ ದಿನ ನಾಲ್ವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
1) ಗೂಡ್ಸ್ ವಾಹನ ಚಾಲಕ ಸಾವು
ಗೂಡ್ಸ್ ವಾಹನ ಚಾಲಕರೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ.ಅಶೋಕ್ ಜೀರಿಗವಾಡ (48) ಮೃತ ದುರ್ದೈವಿ. ಮೃತ ಅಶೋಕ್ ಸವದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿ. ಎಪಿಎಂಸಿ ಮಾರುಕಟ್ಟೆಗೆ ಹೆಸರು ಕಾಳು ತಂದಿದ್ದರು. ಈ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ.ಎದೆನೋವಿನಿಂದ ಸ್ಥಳದಲ್ಲೇ ಕುಸಿದು ಬಿದ್ದ ಅಶೋಕ್ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
2) ದಾವಣಗೆರೆಯಲ್ಲಿ 22 ವರ್ಷದ ಯುವಕ ಸಾವು
ದಾವಣಗೆರೆಯಲ್ಲಿ ಹೃದಯಾಘಾತದಿಂದ 22 ವರ್ಷದ ಯುವಕ ಮೃತಪಟ್ಟಿದ್ದಾನೆ. ಉದ್ಯಮಿ ರೇಖಾ ಮುರುಗೇಶ್ ಅವರ ಪುತ್ರ ಅಕ್ಷಯ್ ಮೃತಪಟ್ಟವರು.ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅಕ್ಷಯ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ದಾವಣಗೆರೆಯ ಜಯನಗರ ನಿವಾಸಿ ಅಕ್ಷಯ್ ಸಾವಿನೊಂದಿಗೆ ದಾವಣಗೆರೆ ಮೂರು ತಿಂಗಳಲ್ಲಿ 75 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎನ್ನಲಾಗಿದೆ.
3) ಧಾರವಾಡದಲ್ಲಿ 25 ವರ್ಷದ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪುರೋಹಿತ ನಗರದ ಜೀವಿಯಾ ಕುಸಗೂರು ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿದ್ದಾರೆ.
4) ಕನಕಪುರ ತಾಲೂಕಿನ ಕೊಗ್ಗೆ ದೊಡ್ಡಿ ಗ್ರಾಮದ 38 ವರ್ಷದ ಮಾದೇಶ್ ನಾಯ್ಕ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಾದೇಶ್ ನಾಯ್ಕ್ ಫಾರೆಸ್ಟ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.