ಬೆಳಗಾವಿ : ರಾಜ್ಯದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಧಿತರನ್ನು ಕಾಮುಕ ಮಹಾಂತೇಶ ಹಿಪ್ಪರಗಿ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈತ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಕೂಡಲೇ ಬಾಲಕಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾಳೆ.
ಆರೋಪಿಯ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಂಡ ಐಗಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You Might Also Like
			TAGGED:ಕಾಮುಕರ ಅಟ್ಟಹಾಸ		
		
 
			 
		 
		 
		 
		 Loading ...
 Loading ... 
		 
		 
		