ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದಿದೆ.
ಜ್ಯೋತಿ(45) ಮೃತಪಟ್ಟವರು ಎಂದು ಹೇಳಲಾಗಿದೆ. ಜ್ಯೋತಿ ಮನೆ ಮುಂದೆ ಕಸಗೂಡಿಸುತ್ತಿದ್ದಾಗ ಮಾಂಗಲ್ಯ ಸರ ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸರಗಳವು ಮಾಡುವಾಗ ಕಳ್ಳರು ಸ್ಪ್ರೇ ಸಿಂಪಡಿಸಿದ್ದರಿಂದ ಕುಸಿದು ಬಿದ್ದು ಜ್ಯೋತಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

