SHOCKING: ಶೌಚಾಲಯದಲ್ಲಿ ತಾನೇ ಹೆರಿಗೆ ಮಾಡಿಕೊಂಡು ಮಗುವಿನ ಕತ್ತು ಸೀಳಿ ಕೊಂದ ಮಹಿಳೆ

ಶಿವಮೊಗ್ಗ: ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ಶೌಚಾಲಯದಲ್ಲಿ ಕಳೆದ ಶನಿವಾರ ಮಗುವಿನ ಶವ ಪತ್ತೆಯಾಗಿದ್ದ ಪ್ರಕರಣ ತಿರುವು ಪಡೆದಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸಿ ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ. ಹೆತ್ತ ತಾಯಿಯೇ ತನ್ನ ಒಂದು ದಿನದ ಗಂಡು ಶಿಶುವನ್ನು ಕತ್ತು ಸೀಳಿ ಕೊಲೆ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ತಿಮ್ಲಾಪುರ ಗ್ರಾಮದ ಶೈಲಾ ಶಿಶುವನ್ನು ಕೊಲೆ ಮಾಡಿದ ಆರೋಪಿ. ಪೊಲೀಸರಿಗೆ ಆರಂಭದಲ್ಲಿಯೇ ಹೆರಿಗೆ ವಾರ್ಡ್ ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಶೈಲಾ ಮೇಲೆ ಅನುಮಾನ ಬಂದಿದೆ. ಆದರೆ ದಂಪತಿ ಮಗು ತಮ್ಮದಲ್ಲ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದರು. ಹೆರಿಗೆ ವಾರ್ಡ್ ನಲ್ಲಿ ನಿಯೋಜಿಸಿದ್ದ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿಗೆ ಶೈಲಾ ಮೇಲೆ ಅನುಮಾನ ಬಂದಿದೆ. ಆಸ್ಪತ್ರೆಯಿಂದ ಶೈಲಾ ಗುಣಮುಖರಾಗಿ ಬಿಡುಗಡೆಯಾದ ಬಳಿಕ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಶಿಶುವನ್ನು ಕೊಲೆ ಮಾಡಿರುವ ಬಗ್ಗೆ ತಿಳಿಸಿದ್ದಾಳೆ.

ಈಗಾಗಲೇ ಶೈಲಾಗೆ ಇಬ್ಬರು ಮಕ್ಕಳಿದ್ದು, 4 ವರ್ಷದ ಹಿಂದೆ ಸಂತಾನಹರಣ ಶಸ್ತ್ರಚಿಕಿತ್ಸೆಯಾಗಿದೆ. ನಂತರದಲ್ಲಿ ಶೈಲಾ ಗರ್ಭಿಣಿಯಾಗಿದ್ದು, ಕುಟುಂಬದವರಿಗೆ ಮಾಹಿತಿ ನೀಡಿರಲಿಲ್ಲ. ಆಗಸ್ಟ್ 16ರಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ನಾದಿನಿಯ ಹೆರಿಗೆಯಾಗಿದ್ದು, ನೋಡಲು ಬಂದಿದ್ದ ಶೈಲಾಗೂ ಹೆರಿಗೆ ನೋವು ಕಾಣಿಸಿಕೊಂಡಿದೆ. ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾದ ಶೈಲಾ ಶೌಚಾಲಯದಲ್ಲಿ ಒಬ್ಬಳೇ ನಾರ್ಮಲ್ ಹೆರಿಗೆ ಮಾಡಿಕೊಂಡು ಶಸ್ತ್ರಚಿಕಿತ್ಸೆಗೆ ಬಳಸುವ ಬ್ಲೇಡ್ ನಿಂದ ಮಗುವಿನ ಕತ್ತು ಕೊಯ್ದು ಕೊಲೆ ಮಾಡಿದ್ದಾಳೆ ಎಂದು ಹೇಳಲಾಗಿದೆ. ಕೊಲೆ ಆರೋಪದಡಿ ಆರೋಪಿ ಶೈಲಾರನ್ನು ಪೊಲೀಸರು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read